ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ-2 ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ.
ಚಿತ್ರದ ಯಾವುದೇ ದೃಶ್ಯಕ್ಕೂ ಕತ್ತರಿ ಪ್ರಯೋಗ ಮಾಡದೆ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ. ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆ ಕಾಣುವ ಸಾಧ್ಯತೆ ಇದೆ.
ಮುಂಗಾರು ಮಳೆ-2 ಚಿತ್ರವನ್ನು ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶಿಸಿದ್ದಾರೆ. ಈಗಾಗಲೇ ಬಿಡುಗಡೆಗೊಂಡಿರುವ ಹಾಡುಗಳು ಹಾಗೂ ಟೀಸರ್ ಅಭಿಮಾನಿಗಳ ಗಮನ ಸೆಳೆದಿದೆ.