ಕಮಲೇಶ್ ಪಾಂಡೆ 
ಸಿನಿಮಾ ಸುದ್ದಿ

ಕಿರುತೆರೆ ನಟ 'ಕ್ರೈಮ್ ಪ್ಯಾಟ್ರೋಲ್' ಪೊಲೀಸ್ ಆಫೀಸರ್ ಕಮಲೇಶ್ ಪಾಂಡೆ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕ್ರೈಮ್ ಪ್ಯಾಟ್ರೋಲ್ ನಲ್ಲಿ ಪೊಲೀಸ್ ಆಫೀಸರ್ ಪಾತ್ರದಲ್ಲಿ ಅಭಿನಯಿಸಿದ್ದ ಕಿರುತೆರೆ ನಟ ಕಮಲೇಶ್ ಪಾಂಡೆ ಗುಂಡಿಕ್ಕಿಕೊಂಡು...

ಜಬಲ್ಪುರ್: ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕ್ರೈಮ್ ಪ್ಯಾಟ್ರೋಲ್ ನಲ್ಲಿ ಪೊಲೀಸ್ ಆಫೀಸರ್ ಪಾತ್ರದಲ್ಲಿ ಅಭಿನಯಿಸಿದ್ದ ಕಿರುತೆರೆ ನಟ ಕಮಲೇಶ್ ಪಾಂಡೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಮಧ್ಯಪ್ರದೇಶದ ಜಬಲ್ ಪುರದಲ್ಲಿರುವ ತಮ್ಮ ಪತ್ನಿಯ ಸಹೋದರಿ ಮನೆಯಲ್ಲಿ ಕಮಲೇಶ್ ಪಾಂಡೆ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಪತ್ನಿಯ ಸಹೋದರಿ ಅಂಜನಿ ಚತುರ್ವೇದಿ ಮನೆಯಲ್ಲಿ ಇದ್ದರು ಎನ್ನಲಾಗಿದೆ. 
ಅಂಜನಿ ಚತುರ್ವೇದಿ ಅವರು ಕೆಲ ದಿನಗಳ ಹಿಂದಷ್ಟೇ ತಮ್ಮ ಪುತ್ರಿಯ ಮಗಳ ವಿವಾಹ ಮಾಡಿದ್ದು ಈ ವಿವಾಹ ಸಮಾರಂಭಕ್ಕೆ ಕಮಲೇಶ್ ಅವರನ್ನು ಆಹ್ವಾನಿಸಿರಲಿಲ್ಲ. ಇದರಿಂದ ಬೇಸರಗೊಂಡು ಕಮಲೇಶ್ ಅಂಜನಿ ಮನೆಗೆ ಹೋಗಿ ಜಗಳವಾಡಿದ್ದು ಬಳಿಕ ಪಿಸ್ತೂಲಿನಿಂದ ಎದೆಗೆ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾರೆ. 
ಸದ್ಯ ಪೊಲೀಸರು ಕಮಲೇಶ್ ಅವರದ್ದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದು ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT