ಸಾಯಿ ಕುಮಾರ್ 
ಸಿನಿಮಾ ಸುದ್ದಿ

ಮಹೇಶ್ ರಾವ್ ಮುಂದಿನ ಚಿತ್ರದಲ್ಲಿ ಸಾಯಿ ಕುಮಾರ್

ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಚಿತ್ರದ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಹಿಟ್ ಜೋಡಿ ಮತ್ತೆ ಒಂದಾಗುವ ಮೂಲಕ ತೀವ್ರ ಕುತೂಹಲ...

ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಚಿತ್ರದ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಹಿಟ್ ಜೋಡಿ ಮತ್ತೆ ಒಂದಾಗುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದ ಮಹೇಶ್ ರಾವ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಇನ್ನೂ ಹೆಸರಿಡದ ಚಿತ್ರದಲ್ಲಿ ಡೈಲಾಗ್ ಕಿಂಗ್ ಸಾಯಿ ಕುಮಾರ್ ಅಭಿನಯಿಸುತ್ತಿರುವುದು ಮತ್ತೊಂದು ವಿಶೇಷ.
ರಂಗಿತರಂಗದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಗಮನ ಸೆಳೆದಿದ್ದ ಸಾಯಿ ಕುಮಾರ್ ಅವರು ಇದೀಗ ಕೆ.ಮಂಜು ನಿರ್ಮಾಣದ ಹಾಗೂ ಮಹೇಶ್ ರಾವ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಮಹೇಶ್ ರಾವ್ ಅವರ ಹೆಸರಿಡದ ಚಿತ್ರದಲ್ಲಿ ಸಾಯಿ ಕುಮಾರ್ ಅವರು ರಾಧಿಕಾ ಪಂಡಿತ್ ಅವರ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಇದೊಂದು ಆಕರ್ಷಕ ಪಾತ್ರ ಎಂಬ ಕಾರಣವನ್ನು ಅವರು ಒಪ್ಪಿಕೊಂಡಿದ್ದಾರಂತೆ.
ಮಹೇಶ್ ಅವರು ಫೆಬ್ರವರಿ 25ರಿಂದ ಚಿತ್ರದ ಚಿತ್ರೀಕರಣ ಆರಂಭಿಸುವ ಸಿದ್ಧತೆ ನಡೆಸಿದ್ದು, ಚಿತ್ರದ ಟೈಟಲ್ ಏನಿರಬಹುದು ಎಂಬುದು ಇದೀಗ ಮತ್ತಷ್ಚು ಕುತೂಹಲ ಮೂಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹೇಶ್ ಅವರು, ಚಿತ್ರದ ಹೆಸರು ಇನ್ನೂ ನಿರ್ಧಾರವಾಗಿಲ್ಲ. ಆದರೆ ಟೈಟಲ್ ಬಗ್ಗೆ ಯಾಕಿಷ್ಟು ಉತ್ಸಾಹ ಎಂಬುದು ನನಗೆ ಅಚ್ಚರಿ ಮೂಡಿಸಿದೆ ಎಂದಿದ್ದಾರೆ.
ನಾಲ್ಕರಿಂದ ಐದು ಹೆಸರು ಅಂತಿಮಗೊಳಿಸಲಾಗಿದ್ದು, ಅದರಲ್ಲಿ ಒಂದನ್ನು ಆಯ್ಕೆ ಮಾಡಲಾಗುವುದು ಎಂದು ನಿರ್ಮಾಪ ಕೆ.ಮಂಜು ಅವರು ತಿಳಿಸಿದ್ದಾರೆ. ಅಲ್ಲದೆ 'ಮಾಂಜಾ' ಎಂದು ಹೆಸರಿಡುವಂತೆ ನನ್ನ ಸ್ನೇಹಿತರು ಸಲಹೆ ನೀಡಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT