ನಟ ಶಾರುಖ್ ಖಾನ್ ವಾಹನದ ಮೇಲೆ ದುಷ್ಕರ್ಮಿಗಳಿಂದ ದಾಳಿ
ಅಹಮದಾಬಾದ್: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಕಾರಿಗೆ ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆಯೊಂದು ಭಾನುವಾರ ಅಹಮದಾಬಾದ್ ನಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ರಸ್ತೆಯಲ್ಲಿ ಹೋಗುತ್ತಿದ್ದ ಕಾರಿನ ಮೇಲೆ ಅನಾಮಿಕ ವ್ಯಕ್ತಿಗಳು ಕಲ್ಲೆಸೆಯುವ ಮೂಲಕ ಶಾರುಖ್ ಅವರ ಕಾರಿನ ಮೇಲೆ ದಾಳಿ ಮಾಡಿದ್ದಾರೆಂದು ತಿಳಿದುಬಂದಿದೆ. ಅದೃಷ್ಟವಶಾತ್ ದಾಳಿ ವೇಳೆ ಶಾರುಖ್ ಖಾನ್ ಅವರು ಕಾರಿನಲ್ಲಿ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ಶಾರುಖ್ ಖಾನ್ ಅವರು ಪ್ರಸ್ತುತ ಮುಂಬರುವ ರಯೀಸ್ ಚಿತ್ರದ ಚಿತ್ರೀಕರಣದಲ್ಲಿ ಕಾರ್ಯನಿರತರಾಗಿದ್ದು, ಚಿತ್ರದ ಚಿತ್ರೀಕರಣಕ್ಕಾಗಿ ಇತ್ತೀಚೆಗಷ್ಟೇ ಅಹ್ಮದಾಬಾದ್ ಗೆ ಆಗಮಿಸಿದ್ದರು.
ಇತ್ತೀಚೆಗಷ್ಟೇ ಅಸಹಿಷ್ಣುತೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಶಾರುಖ್ ಖಾನ್ ಅವರು, ದೇಶದಲ್ಲಿ ಅಸಹಿಷ್ಣುತೆಯಿದೆ ಎಂದು ಹೇಳಿ ವಿವಾದಕ್ಕೆ ಸಿಲುಕಿಕೊಂಡಿದ್ದರು. ಶಾರುಖ್ ಅವರ ಈ ಹೇಳಿಕೆಗೆ ಹಲವು ವಿರೋಧಗಳು ವ್ಯಕ್ತವಾಗಿದ್ದವು. ನಂತರ ತಮ್ಮ ಹೇಳಿಕೆ ಕುರಿತಂತೆ ಜನರ ಬಳಿ ಕ್ಷಮಾಪಣೆಯನ್ನು ಕೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics