ನಲ್ಗೊಂಡ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಟಿ ಪ್ರಣೀತಾ ಕಾರು ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಂಷಾಬಾದ್ ಏರ್ ಪೋರ್ಟ್ ಗೆ ತೆರಳುತ್ತಿದ್ದ ವೇಳೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮೋತೆ ಗ್ರಾಮದ ಸಮೀಪ ಕಾರು ಪಲ್ಪಿ ಹೊಡೆದಿದೆ. ಕಾರಿನಲ್ಲಿದ್ದ ಪ್ರಣೀತಾ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡಿರುವ ಪ್ರಣೀತಾರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.