ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಮಾರ್ಚ್ ನಲ್ಲಿ ಚಕ್ರವ್ಯೂಹ ಬಿಡುಗಡೆ?

ಪುನೀತ್ ರಾಜ್ ಕುಮಾರ್ ಅಭಿನಯದ ಚಕ್ರವ್ಯೂಹ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದ್ದು ಮಾರ್ಚ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಚಕ್ರವ್ಯೂಹ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್- ರಚಿತಾ ರಾಮ್ (ಸಂಗ್ರಹ ಚಿತ್ರ)
Srinivas Rao BV
Updated On : 22 Feb 2016, 11:53 am

ರಣವಿಕ್ರಮ ಸಿನಿಮಾ ನಂತರ ಬಿಡುಗಡೆಯಾಗಲಿರುವ ಪುನೀತ್ ರಾಜ್ ಕುಮಾರ್ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅಭಿನಯದ ಚಕ್ರವ್ಯೂಹ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದ್ದು ಮಾರ್ಚ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಚಕ್ರವ್ಯೂಹ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ಪುನೀತ್ ರಾಜ್ ಕುಮಾರ್ ತಮ್ಮ ಭಾಗದ ಡಬ್ಬಿಂಗ್ ಮುಕ್ತಾಯಗೊಳಿಸಿದ್ದಾರೆ. ಇನ್ನು ಕೆಲವು ಕಲಾವಿದರ ಡಬ್ಬಿಂಗ್ ಬಾಕಿ ಇದ್ದು ಶೀಘ್ರವೇ ಆಡಿಯೋ ಬಿಡುಗಡೆ ಮಾಡಲಾಗುತ್ತದೆ ಎಂದು ಚಿತ್ರದ ನಿರ್ಮಾಪಕ ಎನ್ ಕೆ ಲೋಹಿತ್ ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಆಸುಪಾಸಿನಲ್ಲಿ ಚಕ್ರವ್ಯೂಹ ಸಿನಿಮಾ ಬಿಡುಗಡೆ ಮಾಡಬೇಕೆಂಬುದು ಚಿತ್ರ ತಂಡದ ಯೋಜನೆ. ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ  ಚಕ್ರವ್ಯೂಹ ಸಿನಿಮಾಗೆ ಸಂಬಂಧಿಸಿದಂತೆ ಹಲವು ಅಚ್ಚರಿಗಳು ಅಭಿಮಾನಿಗಳಿಗೆ ಕಾದಿವೆ ಎಂದಿದ್ದಾರೆ ಲೋಹಿತ್.    
ರಚಿತಾ ರಾಮ್ ಚಕ್ರವ್ಯೂಹ ಸಿನಿಮಾ ನಾಯಕಿಯಾಗಿದ್ದು ತಮಿಳು ನಟ ಅರುಣ್ ವಿಜಯ್ ಮುಖ್ಯಪಾತ್ರವೊಂದರಲ್ಲಿ ನಟಿಸಿದ್ದಾರೆ. ಎಸ್‌ಎಸ್ ತಮನ್ ಸಂಗೀತ ನಿರ್ದೇಶನ ಮಾಡಿದ್ದು ಶಣ್ಮುಗಂ ಸುಂದರಂ ಅವರ ಛಾಯಾಗ್ರಾಹನ ಚಕ್ರವ್ಯೂಹ ಸಿನಿಮಾದಲ್ಲಿದೆ. ಫೆ.22 ರಿಂದ ಪುನೀತ್ ರಾಜ್ ಕುಮಾರ್ ದೊಡ್ಮನೆ ಹುಡುಗ ಸಿನಿಮಾ ಚಿತ್ರೀಕರಣದಲ್ಲಿ ತೊಡಗಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments