ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಸಖತ್ ಹಿಟ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಜೊತೆಗೆ ಹಿಂದಿನ ಎಲ್ಲಾ ಚಿತ್ರಗಳ ದಾಖಲೆಗಳನ್ನು ಗಾಳಿಗೆ ತೂರಿ ಹೆಚ್ಚು ಹಣ ಗಳಿಸಿದೆ.
ಮಾಸ್ಟರ್ ಪೀಸ್ ಚಿತ್ರ 50 ನೇ ದಿನಕ್ಕಾಗಿ ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.
ಆದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್ ಚಿತ್ರವನ್ನು ಎತ್ತಂಗಡಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.
ಇದು ಯಶ್ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಇದರಿಂದ ಮುಂದಿನ ದಿನದಲ್ಲಿ ಮತ್ತೊಂದು ಸ್ಟಾರ್ ವಾರ್ ಗೆ ಕಾರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.