ಚೆನ್ನೈ: ಬಹುಭಾಷಾ ನಟ ಕಮಲ್ ಹಾಸನ್ ಜು.15 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈ ನ ತಮ್ಮ ಕಚೇರಿಯಲ್ಲಿ ಬಿದ್ದ ಕಮಲ್ ಹಾಸನ್ ಅವರ ಬಲಗಾಲಿನ ಮೂಳೆ ಮುರಿದಿದ್ದು, ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಲವಾದ ಪೆಟ್ಟು ಬಿದ್ದಿರುವ ಪರಿಣಾಮ ಕಮಲ್ ಹಾಸನ್ ಅವರ ಕಾಲಿನ ಮೂಳೆ ಮುರಿದಿದ್ದು, ಶಸ್ತ್ರಚಿಕಿತ್ಸೆಗೊಳಗಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಾಧ್ಯಮಗಳ ವರದಿಗಳ ಪ್ರಕಾರ ಕಮಲ್ ಹಾಸನ್ ಚೆನ್ನೈ ನ ತಮ್ಮ ಕಚೇರಿಯಲ್ಲಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಲಗಾಲಿಗೆ ತೀವ್ರವಾದ ಪೆಟ್ಟು ತಗುಲಿದ್ದು ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ.