'ಕಬಾಲಿ' ಬಿಡುಗಡೆಗೆ ತಡೆ ಕೋರಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಬಾಲಿ' ಚಿತ್ರ ಬಿಡುಗಡೆಗೆ ಈಗ ಆತಂಕ ಎದುರಾಗಿದೆ.
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಬಾಲಿ' ಚಿತ್ರ ಬಿಡುಗಡೆಗೆ ಈಗ ಆತಂಕ ಎದುರಾಗಿದೆ.
ಹೌದು. ವಿಶ್ವದಾದ್ಯಂತ ನಾಳೆ ತೆರೆ ಕಾಣಬೇಕಿದ್ದ ಕಬಾಲಿ ಚಿತ್ರದ ಬಿಡುಗಡೆಗೆ ತಡೆ ಕೋರಿ ಮದ್ರಾಸ್ ಹೈಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಲಾಗಿದೆ. ಕಬಾಲಿ ಚಿತ್ರ ಬಿಡುಗಡೆಯನ್ನು ತಡೆಯಬೇಕೆಂದು ಕೋರಿ ಸುಕ್ರ ಫಿಲಿಮ್ಸ್‌ನ ಆರ್. ಮಹಾಪ್ರಭು ಎಂಬುವವರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಹಿಂದೆ 'ಲಿಂಗ' ಚಿತ್ರದ ವಿತರಣೆ ಮಾಡಿ ನಷ್ಟ ಅನುಭವಿಸಿದ್ದೇನೆ ಎನ್ನುತ್ತಿರುವ ಮಹಾಪ್ರಭು, ರಜನಿಕಾಂತ್ ಹಾಗೂ ಚಿತ್ರ ನಿರ್ಮಾಪಕ ರಾಕ್‌ಲೈನ್ ನಷ್ಟ ಪರಿಹಾರ ನೀಡಿಲ್ಲ. 89 ಲಕ್ಷ ರಪಾಯಿ ನಷ್ಟ ಪರಿಹಾರ ಒದಗಿಸುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ಹೀಗಾಗಿ ನನಗೆ ಹಣ ಸಿಗುವವರೆಗೆ ಕಬಾಲಿ ರಿಲೀಸ್ ಆಗಬಾರದು ಎಂದು ಮಹಾಪ್ರಭು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಂ ಎಂ ಸುಂದರೇಶ್ ರಜನಿಕಾಂತ್, ಚಿತ್ರದ ನಿರ್ಮಾಪಕರಿಗೆ ನೊಟೀಸ್ ಜಾರಿ ಮಾಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.