ದೇಶಪಾಂಡೆ ನಿಧನ 
ಸಿನಿಮಾ ಸುದ್ದಿ

ನಟಿ, ಹಿರಿಯ ರಂಗ ಕಲಾವಿದೆ ಸುಲಭಾ ದೇಶಪಾಂಡೆ ನಿಧನ

ರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ಕಲಾವಿದೆ ಸುಲಭಾ ದೇಶಪಾಂಡೆ (79) ಅವರು ..

ಮುಂಬೈ: ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ಕಲಾವಿದೆ ಸುಲಭಾ ದೇಶಪಾಂಡೆ  (79) ಅವರು ನಿಧನಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬಯಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದರು.

1971ರಲ್ಲಿ ಆವಿಷ್ಕಾರ್‌ ನಟನಾ ತಂಡದೊಂದಿಗೆ ಮರಾಠಿ ಹಾಗೂ ಹಿಂದಿ ರಂಗಭೂಮಿಗೆ ಕಾಲಿಟ್ಟ ಅವರು, ಕ್ರಮೇಣ ಸಿನಿಮಾಗಳಲ್ಲೂ ಕಾಣಿಸಿಕೊಂಡರು

ಹಿರಿಯ ನಟ, ನಾಟಕಕಾರ ವಿಜಯ್ ತೆಂಡೂಲ್ಕರ್ ಅವರಂತಹ ಖ್ಯಾತರ ನಾಟಕಗಳಲ್ಲಿ ಅಭಿನಯಿಸಿರುವ ಸುಲಭಾ ದೇಶಪಾಂಡೆ, ಮರಾಠಿ ಮತ್ತು ಹಿಂದಿ ಚಿತ್ರರಂಗಕ್ಕೆ ಚಿರಪರಿಚಿತರಾಗಿದ್ದರು. ಹಿಂದಿಯ ಖ್ಯಾತ ಚಿತ್ರಗಳಾದ ಭೂಮಿಕಾ(1977), ಅರವಿಂದ್ ದೇಸಾಯಿ ಕಿ ಅಜೀಬ್ ದಾಸ್ತಾನ್(1978), ಗಮನ್ (1978) ಮತ್ತು ಇತ್ತೀಚೆಗೆ ಬಿಡುಗಡೆಯಾದ ಗೌರಿ ಶಿಂಧೆ ಅವರ ಹಿಟ್ ಚಿತ್ರ ‘ಇಂಗೀಷ್ ವಿಂಗ್ಲಿಶ್’ ಚಿತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು.

ವಿಜಯ್ ಮೆಹ್ತಾ, ಸತ್ಯದೇವ್ ದುಬೆ ಜತೆಗೆ ಮರಾಠಿಯಲ್ಲಿ ರಂಗಾಯಣ ತಂಡದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಸುಲಭಾ, 1971 ರಲ್ಲಿ ‘ಆವಿಷ್ಕಾರ್’ ಎಂಬ ಹೆಸರಿನ ನಾಟಕ ತಂಡವನ್ನು ತಮ್ಮ ಪತಿ ಅರವಿಂದ್ ದೇಶಪಾಂಡೆ ಜತೆ ಪ್ರಾರಂಭಿಸಿದ್ದರು.
ಇವರ ಪತಿ ಅರವಿಂದ್‌ ದೇಶ್‌ಪಾಂಡೆ ಅವರೂ ಕೂಡ ರಂಗಭೂಮಿ ಕಲಾವಿದರಾಗಿದ್ದರು. 1987ರಲ್ಲಿ ಅವರು ನಿಧನಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT