ವಿನಯ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸ್ವಚ್ಚ ಬೆಂಗಳೂರು ಅಭಿಯಾನಕ್ಕೆ ಕೈ ಜೋಡಿಸಿದ ರಾಜ್ ಕುಮಾರ್ ಕುಟುಂಬ

ಯೂಟರ್ನ್ ಚಿತ್ರ ತಂಡ ಮೇಲ್ಸೇತುವೆ ರಸ್ತೆ ರಿಪೇರಿ ಮಾಡಿದ ಬೆನ್ನಲ್ಲೇ ರನ್ ಆಂಟನಿ ತಂಡ ಬೆಂಗಳೂರಿನ ರಸ್ತೆಗಳ ಕಸ ವನ್ನು ಸ್ವಚ್ಚಗೊಳಿಸಲು ಮುಂದಾಗಿವೆ....

ಬೆಂಗಳೂರು: ಯೂಟರ್ನ್ ಚಿತ್ರ ತಂಡ ಮೇಲ್ಸೇತುವೆ ರಸ್ತೆ ರಿಪೇರಿ ಮಾಡಿದ ಬೆನ್ನಲ್ಲೇ ರನ್ ಆಂಟನಿ ತಂಡ ಬೆಂಗಳೂರಿನ ರಸ್ತೆಗಳ ಕಸ ವನ್ನು ಸ್ವಚ್ಚಗೊಳಿಸಲು ಮುಂದಾಗಿವೆ.

ಎನ್ ಜಿ ಒ ಸಂಸ್ಥೆ ಜೊತೆಗೂಡಿ, ರನ್ ಆಂಟನಿ ನಟ ಹಾಗೂ ಡಾ. ರಾಜ್ ಕುಮಾರ್ ಅವರ ಮೊಮ್ಮಗ ವಿನಯ್ ರಾಜ್ ಕುಮಾರ್ ಬೀ ಕ್ಲೀನ್ ಕೋ ಗ್ರೀನ್ ಎಂಬ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಏಪ್ರಿಲ್ 24 ರಂದು ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಾಘವೇಂದ್ರ ರಾಜ್ ಕುಮಾರ್ ಮತ್ತೊಬ್ಬ ಪುತ್ರ ಗುರು ರಾಜ್ ಕುಮಾರ್ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ರಾಘವೇಂದ್ರ ರಾಜ್ ಕುಮಾರ್ ಮಂಗಳ ರಾಘವೇಂದ್ರ, ವಿನಯ್ ರಾಜ್ ಕುಮಾರ್,  ನಂದಿನಿ ಲೇಔಟ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರತಿ ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತೇವೆ ಎಂದು ನಟ ವಿನಯ್ ರಾಜ್ ಕುಮಾರ್ ತಿಳಿಸಿದ್ದಾರೆ. ಜೊತೆಗೆ ರಸ್ತೆಗಳನ್ನು ಸ್ವಚ್ಛಗೊಳಿಸಿ,  ಗೋಡೆಗಳ ಮೇಲೆ ಪೈಂಟ್ ಮಾಡಿಸಿ ಗಿಡಗಳನ್ನು ನೆಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಮತ್ತು ಬಸವೇಶ್ವರ ನಗರಗಳಲ್ಲಿ ಸ್ವಚ್ಛತೆ ಕಾರ್ಯಕ್ರಮ ಕೈಗೊಂಡಿರುವ ರನ್ ಆಂಟನಿ ತಂಡ, ಚಿತ್ರ ಬಿಡುಗಡೆಯಾದ ನಂತರ ಸ್ವಚ್ಚತೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ