ಉಡ್ತಾ ಪಂಜಾಬ್ 
ಸಿನಿಮಾ ಸುದ್ದಿ

ಉಡ್ತಾ ಪಂಜಾಬ್ ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಸುಪ್ರೀಂ ನಲ್ಲಿ ಅರ್ಜಿ

ಸಾಕಷ್ಟು ವಿವಾದ ಸೃಷ್ಟಿಸಿದ್ದ ಬಾಲಿವುಡ್ ಬಹು ನಿರೀಕ್ಷಿತ ಚಿತ್ರ ಉಡ್ತಾ ಪಂಜಾಬ್ ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಪಂಜಾಬ್ ಮೂಲದ ಎನ್ ಜಿಒ ಸಂಸ್ಥೆಯೊಂದು ಸುಪ್ರೀಂಕೋರ್ಟ್ ಬಳಿ...

ನವದೆಹಲಿ:  ಸಾಕಷ್ಟು ವಿವಾದ ಸೃಷ್ಟಿಸಿದ್ದ ಬಾಲಿವುಡ್ ಬಹು ನಿರೀಕ್ಷಿತ ಚಿತ್ರ ಉಡ್ತಾ ಪಂಜಾಬ್ ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಪಂಜಾಬ್ ಮೂಲದ ಎನ್ ಜಿಒ ಸಂಸ್ಥೆಯೊಂದು ಸುಪ್ರೀಂಕೋರ್ಟ್ ಬಳಿ ಬುಧವಾರ ಮನವಿ ಮಾಡಿಕೊಂಡಿದೆ.

ಈ ಕುರಿತಂತೆ ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿರುವ ಎನ್ ಜಿಒ ಸಂಸ್ಥೆಯು, ಸೆನ್ಸಾರ್ ಬೋರ್ಡ್ ನಿರ್ಧಾರದಲ್ಲಿ ಬಾಂಬೆ ಹೈ ಕೋರ್ಟ್ ಮಧ್ಯಸ್ಥಿಕೆ ವಹಿಸಬಾರದು. ಚಿತ್ರದ ಕುರಿತು ಸಲ್ಲಿಸಲಾಗಿರುವ ಅರ್ಜಿಯನ್ನು ಕೂಡಲೇ ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಹೇಳಿದೆ. ಇನ್ನು ಎನ್ ಜಿಒ ಸಲ್ಲಿಕೆ ಮಾಡಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ನಿರಾಕರಿಸಿದ್ದು, ನ್ಯಾಯಾಲಯದ ನೋಂದಣಿಯಂತೆಯೇ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದೆ.

ನೈಜ ಕಥೆಯಾಧರಿಸಿ ಸಿನಿಮಾ ನಿರ್ದೇಶಿಸಿದ್ದ ಅನುರಾಗ್ ಕಶ್ಯಪ್ ಅವರಿಗೆ ಸೆನ್ಸಾರ್ ಮಂಡಳಿ ಆಘಾತ ನೀಡಿತ್ತು. ಪಂಜಾಬಿನ ಡ್ರಗ್ ಮಾಫಿಯಾ ಸತ್ಯಾಸತ್ಯತೆ ಬಿಚ್ಚಿಡುವ ಉಡ್ತಾ ಪಂಜಾಬ್ ಚಿತ್ರದ 89 ದೃಶ್ಯಗಳಿಗೆ ಕತ್ತರಿ ಹಾಕಲಾಗಿತ್ತು. ಆದರೆ ಸೆನ್ಸಾರ್ ಮಂಡಳಿಯ 89 ಕಟ್ ಗಳ ವಿರುದ್ಧ ಚಿತ್ರತಂಡ ಹೈಕೋರ್ಟ್ ಮೆಟ್ಟಿಲೇರಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜೂ.13ರಂದು ಅಂತಿಮ ತೀರ್ಪು ಪ್ರಕಟಿಸಿತ್ತು. ಅಲ್ಲದೆ ಚಲನಚಿತ್ರಗಳಿಗೆ ಕತ್ತರಿ ಪ್ರಯೋಗ ಮಾಡುವ (ಸೆನ್ಸಾರ್) ಅಧಿಕಾರವನ್ನು ಶಾಸನಬದ್ಧವಾಗಿ ಸಿಬಿಎಫ್​ಸಿ ಹೊಂದಿಲ್ಲ. ಏಕೆಂದರೆ ಸಿನೆಮಾಟೋಗ್ರಾಫ್ ಕಾಯ್ದೆಯಲ್ಲಿ ಸೆನ್ಸಾರ್ ಎಂಬ ಪದ ಸೇರ್ಪಡೆಯಾಗಿಲ್ಲ.

ಉಡ್ತಾ ಪಂಜಾಬ್’ ಚಿತ್ರವು ಸ್ಥಳ ಒಂದರಲ್ಲಿ ಮಾದಕ ದ್ರವ್ಯ ಹಾವಳಿಯನ್ನು ತೋರಿಸುವ ಚಿತ್ರವಾಗಿದ್ದು, ಅದರಲ್ಲಿ ಪಂಜಾಬನ್ನು ಕೆಟ್ಟದಾಗಿ ತೋರಿಸುವಂತಹ ಅಥವಾ ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುವಂತಹ ಯಾವುದೇ ವಿಚಾರ ನಮಗೆ ಕಾಣುತ್ತಿಲ್ಲ. ಸೃಜನಾತ್ಮಕ ಸ್ವಾತಂತ್ರ್ಯನ್ನು ಅನಗತ್ಯವಾಗಿ ಹತ್ತಿಕ್ಕಬಾರದು. ಚಿತ್ರದಲ್ಲಿ ಏನು ಇರಬೇಕು ಎಂದು ಯಾರೂ ಚಿತ್ರನಿರ್ಮಾಪಕನಿಗೆ ನಿರ್ದೇಶನ ನೀಡುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ