ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಕಾಲೇಜು ಹೈದನಾಗಿ ನೋಟ ಬದಲಿಸಿಕೊಂಡ ಗೋಧಿ ಬಣ್ಣದ ಟೆಕ್ಕಿ

2012 ರಲ್ಲಿ 'ತುಘಲಕ್' ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಕ್ಷಿತ್ ಶೆಟ್ಟಿ ತಮ್ಮದೇ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಇತ್ತೀಚಿನ ಚಿತ್ರ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು'

ಬೆಂಗಳೂರು: 2012 ರಲ್ಲಿ 'ತುಘಲಕ್' ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಕ್ಷಿತ್ ಶೆಟ್ಟಿ ತಮ್ಮದೇ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಇತ್ತೀಚಿನ ಚಿತ್ರ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ನಟನ ಯಶಸ್ಸನ್ನು ಇನ್ನಷ್ಟು ಹೆಚ್ಚಿಸಿದೆ.

ಈಗ ಅವರ ಮುಂದಿನ ಚಿತ್ರ 'ಕಿರಿಕ್ ಪಾರ್ಟಿ'ಗೆ ತಯಾರಿ ನಡೆಸಿರುವ ನಟ ತಮ್ಮ ಹಿಂದಿನ ನಿನೆಮಾದ ಸಾಫ್ಟವೇರ್ ಎಂಜಿನಿಯರ್ ಪಾತ್ರದಿಂದ ಕಾಲೇಜು ಹುಡುಗನ ಪಾತ್ರಕ್ಕೆ ಜಿಗಿಯಲಿದ್ದಾರೆ. ಅದಕ್ಕಾಗಿ ತಮ್ಮ ನೋಟದ ಶೈಲಿಯನ್ನು ಬದಲಿಸಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಕೆಲವು ಭಾಗಗಳ ಚಿತ್ರೀಕರಣ ಹಾಸನದಲ್ಲಿ ಮುಗಿದಿದ್ದು ಒಂದು ತಿಂಗಳ ವಿರಾಮ ತೆಗೆದುಕೊಂಡಿದೆ ಚಿತ್ರತಂಡ. ಯುವಕರ ಜೊತೆ ಚಿತ್ರೀಕರಣ ನಡೆಸುತ್ತಿದ್ದು ನಾನು ಚಿಕ್ಕವನಾಗಿದ್ದೇನೆ ಎಂದು ಹಾಸ್ಯ ಚಟಾಕಿ ಹಾರಿಸುವ ರಕ್ಷಿತ್ "ಈ ಸಿನೆಮಾ ಹಾಸ್ಯ ಚಿತ್ರ. ಚಿತ್ರೀಕರಣದ ವೇಳೆ ಬಹಳ ಮಜವಾಗಿತ್ತು" ಎನ್ನುತ್ತಾರೆ.

ರಶ್ಮಿಕಾ ಮಂದಣ್ಣ ಮತ್ತು ಸಂಯುಕ್ತಾ ಹೆಗಡೆ ಇಬ್ಬರು ಹೊಸ ನಾಯಕ ನಟಿಯರು ಸಿನೆಮಾದಲ್ಲಿದ್ದು, ಇನ್ನಿತರ 20 ಹೊಸಬರು ಕೂಡ ಕಾಣಿಸಿಕೊಳ್ಳಲಿದ್ದಾರಂತೆ. ಈ ಮಧ್ಯೆ ರಕ್ಷಿತ್ ಶೆಟ್ಟಿ ಹೊಸ ಸ್ಕ್ರಿಪ್ಟ್ ಬರೆಯುವುದರಲ್ಲಿ ಕೂಡ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT