ನಾಗಚೈತನ್ಯ - ಸಮಂತಾ 
ಸಿನಿಮಾ ಸುದ್ದಿ

ಶೀಘ್ರದಲ್ಲೇ ಸಮಂತಾ-ನಾಗಚೈತನ್ಯ ನಿಶ್ಚಿತಾರ್ಥ, ಖಚಿತಪಡಿಸಿದ ಅಖಿಲ್ ಅಕ್ಕಿನೇನಿ

ಟಾಲಿವುಡ್​ಸೂಪರ್ ಸ್ಟಾರ್ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಹಾಗೂ ಸ್ಟಾರ್ ನಟಿ ಸಮಂತಾ ವಿವಾಹವಾಗುತ್ತಿದ್ದು, ಜುಲೈ ಅಂತ್ಯ ಅಥವಾ ಅಗಸ್ಟ್...

ಹೈದರಾಬಾದ್: ಟಾಲಿವುಡ್​ಸೂಪರ್ ಸ್ಟಾರ್ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಹಾಗೂ ಸ್ಟಾರ್ ನಟಿ ಸಮಂತಾ ವಿವಾಹವಾಗುತ್ತಿದ್ದು, ಜುಲೈ ಅಂತ್ಯ ಅಥವಾ ಅಗಸ್ಟ್ ಮೊದಲವಾರದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ನಾಗಾರ್ಜುನ ಅವರ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ತಿಳಿಸಿದ್ದಾರೆ.
ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅವರು ನಾಗಚೈತನ್ಯರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ನಾಗಾರ್ಜುನ ಕಿರಿಯ ಪುತ್ರ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಸಹೋದರ ನಾಗಚೈತನ್ಯ ಹಾಗೂ ಸಮಂತಾ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು, ಮದುವೆ ಆಗಲು ನಿರ್ಧರಿಸಿದ್ದಾರೆ. ಇದಕ್ಕೆ ಎರಡು ಕುಟುಂಬಗಳು ಸಹಮತಿ ಸಹ ಸೂಚಿಸಿವೆ, ಮುಂದಿನ ವರ್ಷ ವಿವಾಹ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. 
ನಾಗ ಚೈತನ್ಯ ಮನಂ ಸಿನಿಮಾದಲ್ಲಿ ಸಮಂತಾ ಜತೆಗೆ ನಟಿಸಿದ್ದರು. ಇದರ ಜತೆಗೆ ಸಮಂತಾ ಜತೆಗೆ ಪ್ರೀತಿಯಲ್ಲಿ ಬಿದ್ದಿದ್ದರು. ಸದ್ಯ ಲಿವೀಂಗ್ ಟುಗೆದರ್‌ನಲ್ಲಿರುವ ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ 
ಈ ಮಧ್ಯೆ ಅಖಿಲ್ ಅಕ್ಕಿನೇನಿ ಹೈದರಾಬಾದ್ ಮೂಲದ ವಿನ್ಯಾಸಗಾರ್ತಿ ಶ್ರೀಯಾ ಸೋಮ್ ಜತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅಕ್ಕಿನೇನಿ ಇದನ್ನು ತಳ್ಳಿ ಹಾಕಿದ್ದು, ಶ್ರೀಯಾ ತಮ್ಮ ಕುಟುಂಬದ ಸ್ನೇಹಿತೆಯಾಗಿದ್ದಾಳೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್