ಮಗಳು ಸಾನ್ವಿ ಹುಟ್ಟುಹಬ್ಬದಲ್ಲಿ ಸುದೀಪ್ ಮತ್ತು ಪ್ರಿಯಾ 
ಸಿನಿಮಾ ಸುದ್ದಿ

ಎಲ್ಲಾ ಮರೆತು ಮತ್ತೆ ಒಂದಾಗಲಿದ್ದಾರಾ ಸುದೀಪ್-ಪ್ರಿಯಾ ದಂಪತಿ?

ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ನಟ ಸುದೀಪ್ ದಂಪತಿ ಎಲ್ಲಾ ಮರೆತು ಮತ್ತೆ ಒಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ....

ಬೆಂಗಳೂರು: ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ನಟ ಸುದೀಪ್ ದಂಪತಿ ಎಲ್ಲಾ ಮರೆತು ಮತ್ತೆ ಒಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲ ದಿನಗಳಲ್ಲಿ ನಡೆದ ಹಲವು ಘಟನೆಗಳು ಇದಕ್ಕೆ ಪುಷ್ಠಿ ನೀಡುತ್ತಿವೆ. ವಿಚ್ಛೇದನಕ್ಕೆಅರ್ಜಿ ಸಲ್ಲಿಸಿರುವ ನಟ ಸುದೀಪ್‌ ಮತ್ತು ಪತ್ನಿ ಪ್ರಿಯಾ ಅವರು ಬುಧವಾರ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು. ಆದರೆ, ಇಬ್ಬರೂ ಗೈರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತು.

ದಂಪತಿಯ ಹೇಳಿಕೆ ದಾಖಲಿಸುವ ಸಂಬಂಧ ನ್ಯಾಯಾಲಯವು ಬುಧವಾರ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ, ಸುದೀಪ್‌ ಪರವಾಗಿ ಅವರ ಸಹೋದರಿ ಹಾಜರಾಗಿ
ಚಿತ್ರೀಕರಣದಲ್ಲಿ ತೊಡಗಿರುವುದರಿಂದ ಸುದೀಪ್‌ ಹಾಜರಾಗಲು ಸಾಧ್ಯವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೇ, ಸುದೀಪ್‌ ಮತ್ತು ಪ್ರಿಯಾ ಅವರು ರಾಜಿ ಮಾಡಿಕೊಳ್ಳುವ ಸಾಧ್ಯತೆ ಇದ್ದು, ನ್ಯಾಯಾಲಯವು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತು.

ಸುದೀಪ್ ನಿರ್ಮಾಣದ ಜಿಗರ್ ಥಂಡಾ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸುದೀಪ್ ಮತ್ತು ಪ್ರಿಯಾ ದಂಪತಿ ಕಾಣಿಸಿಕೊಂಡಿದ್ದರು. ಜೊತೆಗೆ ತಮ್ಮ ಮಗಳು ಸಾನ್ವಿ ಹುಟ್ಟುಹಬ್ಬವನ್ನು ಇಬ್ಬರು ಸೇರಿ ಆಚರಿಸಿದ್ದರು.ಹೀಗಾಗಿ ಸುದೀಪ್ ಹಾಗೂ ಪ್ರಿಯಾ ವಿಚ್ಛೇದನಕ್ಕೆ ನಾಂದಿ ಹಾಡಿ ಮತ್ತೆ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನೂ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ವೀಕೆಂಡ್ ವಿತ್ ರಮೇಶ್ ಕಾರ್ಯಕಮರ್ದಲ್ಲಿ ಸುದೀಪ್ ಪತ್ನಿ ಪ್ರಿಯಾ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದು, ಹೇಳಿಕೆ ನೀಡಲು ಇಬ್ಬರು ನ್ಯಾಯಾಲಯಕ್ಕೆ ಹಾಜರಾಗದಿರುವುದು ಮತ್ತೆ ಒಟ್ಟಾಗಿ ಜೀವನ ನಡೆಸಲು ಸುದೀಪ್ ದಂಪತಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

2001 ರಲ್ಲಿ ವಿವಾಹವಾಗಿದ್ದ ಸುದೀಪ್ ಪ್ರಿಯಾ ದಂಪತಿ 2015ರ ಸೆಪ್ಟೆಂಬರ್‌ನಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸುವ ಮೂಲಕ ತಮ್ಮ 14 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ಸುದೀಪ್‌ ದಂಪತಿ ಮುಂದಾಗಿದ್ದರು.  ಅದಾದ ನಂತರ ಪ್ರಿಯಾ ಎಲ್ಲಿಯೂ ಇದರ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್