ರಮ್ಯಾ 
ಸಿನಿಮಾ ಸುದ್ದಿ

ಸಿನಿಮಾಗಳಲ್ಲಿ ಅಭಿನಯಿಸಲ್ಲ, ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ:ರಮ್ಯಾ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇನ್ನು ಮುಂದೆ ಸಿನಿಮಾಗಳಲ್ಲಿ ಅಭಿನಯಿಸುವುದಿಲ್ಲವಂತೆ. ಹಾಗಂತ ಖಾಸಗಿ ಚಾನೆಲ್ ವೊಂದಕ್ಕೆ ಹೇಳಿಕೆ ನೀಡಿದ್ದಾರೆ...

ಬೆಂಗಳೂರು: ಸ್ಯಾಂಡಲ್ ವುಡ್  ಕ್ವೀನ್  ರಮ್ಯಾ ಇನ್ನು ಮುಂದೆ ಸಿನಿಮಾಗಳಲ್ಲಿ ಅಭಿನಯಿಸುವುದಿಲ್ಲವಂತೆ. ಹಾಗಂತ ಖಾಸಗಿ ಚಾನೆಲ್ ವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಸಂಸದೆಯಾದ ಬಳಿಕ ಅವರು ಸಿನಿಮಾದತ್ತ ಒಲವು ತೋರಲೇ ಇಲ್ಲ. ಬಳಿಕ ಒಂದು ವರ್ಷ ಎಲ್ಲರಿಂದ ದೂರವಿದ್ದ ರಮ್ಯಾ ಕಳೆದ ವರ್ಷ ಮತ್ತೆ ವಾಪಸ್ಸಾಗಿದ್ದರು. ರಮ್ಯಾ ವಾಪಸ್ಸಾಗುತ್ತಿದ್ದಂತೆ ಅವರು ಮತ್ತೆ ಸಿನಿಮಾದಲ್ಲಿ ಅಭಿನಯಿಸುತ್ತಾರೆ ಅಂತಾ ಅಂದುಕೊಂಡಿದ್ದ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ನಾನು ಇನ್ನು ಮುಂದೆ ಚಿತ್ರಗಳಲ್ಲಿ ಅಭಿನಯಿಸೋದಿಲ್ಲ ಅಂತಾ ಹೇಳಿದ್ದಾರೆ. ನಾನು ಈಗಾಗಲೇ ಅನೇಕ ಸಿನಿಮಾಗಳಲ್ಲಿ ಸಮಾಜಕ್ಕೆ ಹಾಗೇ ಮಾಡಬೇಕು ಹೀಗೆ ಮಾಡಬೇಕು ಅಂತಾ ಅನೇಕ ಸಂದೇಶಗಳನ್ನು ನೀಡಿದ್ದೇನೆ. ಆದ್ರೆ ಅದು ರೀಲ್‌ನಲ್ಲಿ.ಆದ್ರೀಗ ನನಗೆ ನಿಜ ಜೀವನದಲ್ಲಿ ಸಮಾಜಸೇವೆ ಮಾಡುವ ಅವಕಾಶ ಸಿಕ್ಕಿದೆ. ಹೀಗಾಗಿ ನಾನು ಈ ಅವಕಾಶವನ್ನು ಕಳೆದುಕೊಳ್ಳುವುದಕ್ಕೆ ಇಷ್ಟ ಪಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಸಿನಿಮಾದಲ್ಲಿ ಅಭಿನಯಿಸಲು ಇದು ಸಕಾಲವಲ್ಲ. ಹಾಗಾಗಿ ಇನ್ಮೇಲೆ ನಾನು ಸಿನಿಮಾದಲ್ಲಿ ಅಭಿನಯಿಸೋದಿಲ್ಲ. ರಾಜಕೀಯದಲ್ಲೇ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ ಅಂತಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!