'ತಿಥಿ' ಚಲನಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಕನಸು ನನಸಾಗಿದೆ; ಏಪ್ರಿಲ್ ಅಂತ್ಯಕ್ಕೆ ಸಿನೆಮಾ ರಾಷ್ಟ್ರದಾದ್ಯಂತ ಬಿಡುಗಡೆ: ತಿಥಿ ನಿರ್ದೇಶಕ

ತಮ್ಮ ಚೊಚ್ಚಲ ಚಿತ್ರ 'ತಿಥಿ' ಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರಪ್ರಶಸ್ತಿ ಗೆದ್ದಿರುವ ನಿರ್ದೇಶಕ ರಾಮ್ ರೆಡ್ಡಿ "ಕನಸು ನನಸಾಗಿದೆ" ಎಂದಿರುವುದಲ್ಲದೆ ಏಪ್ರಿಲ್ ಅಂತ್ಯಕ್ಕೆ ದೇಶದಾದ್ಯಂತ

ಚೆನ್ನೈ: ತಮ್ಮ ಚೊಚ್ಚಲ ಚಿತ್ರ 'ತಿಥಿ' ಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರಪ್ರಶಸ್ತಿ ಗೆದ್ದಿರುವ ನಿರ್ದೇಶಕ ರಾಮ್ ರೆಡ್ಡಿ "ಕನಸು ನನಸಾಗಿದೆ" ಎಂದಿರುವುದಲ್ಲದೆ ಏಪ್ರಿಲ್ ಅಂತ್ಯಕ್ಕೆ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಸಿನೆಮಾ ಬಿಡುಗಡೆಯಾಗಲಿದೆ ಎಂದಿದ್ದಾರೆ.

"ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ ಮೇಲೆ, ಈಗ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವುದು ಕನಸು ನನಸಾದಂತೆ" ಎಂದಿದ್ದಾರೆ ನಿರ್ದೇಶಕ ರಾಮ್

'ತಿಥಿ' ಲೊಕಾರ್ನೊ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನೆಮಾ ಪ್ರಶಸ್ತಿ ಗೆದ್ದಿತ್ತು. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪ್ರಶಸ್ತಿ ಗಳಿಸಿತ್ತು.

"ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲಿ ಸಿನೆಮಾ ಬಿಡುಗಡೆಯಾಗಲಿದ್ದು, ರಾಣಾ ದಗ್ಗುಬಟ್ಟಿ ಅಂತಹವರ ಬೆಂಬಲದೊಂದಿಗೆ ಕರ್ನಾಟಕ ಮತ್ತು ರಾಷ್ಟ್ರದಾದ್ಯಂತ ಹೆಚ್ಚೆಚ್ಚು ಪ್ರೇಕ್ಷಕರನ್ನು 'ತಿಥಿ' ಸಿನೆಮಾ ಸೆಳೆಯಲಿದೆ ಎಂದು ನಂಬಿದ್ದೇನೆ" ಎನ್ನುತ್ತಾರೆ ರಾಮ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT