ಪುತ್ರಿಯೊಂದಿಗೆ ಸುದೀಪ್, ಪ್ರಿಯಾ 
ಸಿನಿಮಾ ಸುದ್ದಿ

ಒಂದೇ ವೇದಿಕೆಯಲ್ಲಿ ಪತ್ನಿ, ಮಗಳೊಂದಿಗೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸುದೀಪ್

ಕಿಚ್ಚ ಸುದೀಪ್ ಪತ್ನಿ ಪ್ರಿಯಾರಿಂದ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಒಂದೇ...

ಬೆಂಗಳೂರು: ಕಿಚ್ಚ ಸುದೀಪ್ ಪತ್ನಿ ಪ್ರಿಯಾರಿಂದ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಒಂದೇ ವೇದಿಕೆಯಲ್ಲಿ ಪತ್ನಿ ಮಗಳೊಂದಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಸುದೀಪ್ ದಂಪತಿ ಪರಸ್ಪರ ಒಪ್ಪಿಗೆಯ ವಿಚ್ಛೇದನ ಪಡೆಯಲು ಮುಂದಾಗಿ ಸುದ್ದಿಯಾಗಿದ್ದರು. ಇತ್ತೀಚಿಗಷ್ಟೇ ಕೌಟುಂಬಿಕ ನ್ಯಾಯಾಲಯದಲ್ಲಿ ಒಟ್ಟಿಗೆ ವಿಚಾರಣೆಗೆ ಹಾಜರಾಗದಿದ್ದರಿಂದ ವಿಚಾರಣೆಯನ್ನು ಮುಂದೂಡಲಾಗಿತ್ತು.
ವಿಚ್ಛೇದನದ ಸುದ್ದಿಯಾದ ನಂತರ ಕಿಚ್ಚ ದಂಪತಿ ಎಲ್ಲೂ ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ನಿನ್ನೆ ರಾತ್ರಿ ನಡೆದ ಸುದೀಪ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿರುವ ಜಿಗರ್ ಥಂಡ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ದಂಪತಿಗಳು ಜೊತೆಯಾಗಿ ಕಾಣಿಸಿಕೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈ ವೇಳೆ ಸುದೀಪ್ ಅವರ ಮುದ್ದಿನ ಮಗಳು ಸಾನ್ವಿ ಕೂಡ ಜೊತೆಗಿದ್ದರು.
ವೇದಿಕೆಯಲ್ಲೂ ಮಾತನಾಡಿದ ದಂಪತಿಗಳು, ಪರಸ್ಪರರ ಹೆಸರೇಳಿಕೊಂಡು ಅನ್ಯೋನ್ಯವಾಗಿ ಮಾತಾಡಿದರು. ಸುದೀಪ್ ಅವರು ತಮ್ಮ ಚಿತ್ರಕ್ಕೆ ಸಹಕರಿಸಿದ ಪ್ರಿಯಾಗೆ ಥ್ಯಾಂಕ್ಸ್ ಕೂಡ ಹೇಳಿದರು. ಕಾರ್ಯಕ್ರಮದಲ್ಲಿ ಸುದೀಪ್ ತಂದೆ ಸಂಜೀವ್ ಕೂಡಾ ಭಾಗವಹಿಸಿದರು. ನಟ ರವಿಚಂದ್ರನ್, ವಿಲನ್ ರವಿಶಂಕರ್ ಸೇರಿದಂತೆ ಜಿಗರ್ ಥಂಡ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!

ಮೋದಿಗೆ 'ಭಾರತ ರತ್ನ'?: Modi ಹೆಸರಲ್ಲಿ ಒಂದು ತಿಂಗಳು ಸೇವಾ ಸಂಕಲ್ಪ ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾ

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...