ಅನಿಲ್-ಉದಯ್ 
ಸಿನಿಮಾ ಸುದ್ದಿ

'ಮಾಸ್ತಿ ಗುಡಿ' ಶೂಟಿಂಗ್ ವೇಳೆ ದುರಂತ: ತಿಪ್ಪಗೊಂಡನಹಳ್ಳಿ ಕೆರೆಗೆ ಹಾರಿದ ಖಳನಟ ಅನಿಲ್, ಉದಯ್ ವಿಧಿವಶ

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಮಾಗಡಿ ರಸ್ತೆಯಲ್ಲಿರುವ ತಿಪ್ಪಗೊಂಡನಹಳ್ಳಿ..

ಬೆಂಗಳೂರು: ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಮಾಗಡಿ ರಸ್ತೆಯಲ್ಲಿರುವ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರಿದ ಖಳನಟರಾದ ಅನಿಲ್ ಮತ್ತು ಉದಯ್ ಅವರು ನೀರಿನಿಂದ ಮೇಲಕ್ಕೆ ಬಾರದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಯ್. ಅನಿಲ್ ಹಾಗೂ ಉದಯ್ ಮೂವರು ಹೆಲಿಕಾಪ್ಟರ್ ನಿಂದ ಕೆರೆಗೆ ಜಿಗಿಯುತ್ತಾರೆ. ಇವರಲ್ಲಿ ದುನಿಯಾ ವಿಜಯ್ ಈಜಿದ್ದು ಅವರನ್ನು ತೆಪ್ಪದ ಮೂಲಕ ದಡಕ್ಕೆ ಕರೆತರಲಾಗಿದೆ. ಆದರೆ ಅನಿಲ್ ಮತ್ತು ಉದಯ್ ಈಜಲು ಬರದೇ ನೀರು ಪಾಲಾಗಿದ್ದಾರೆ. ಚಿತ್ರತಂಡದ ನಿರ್ಲಕ್ಷವೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿ, ಪೊಲೀಸರು ಹಾಗೂ ಈಜು ತಜ್ಞರು ಆಗಮಿಸಿದ್ದು ನಟರ ಮೃತದೇಹಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ.
ಇಂದು ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಕೆರೆಗೆ ಜಿಗಿದಿದ್ದ ಅನಿಲ್ ಹಾಗೂ ಉದಯ್ ಅವರು ಮೃತಪಟ್ಟಿರುವುದಾಗಿ ತಾವರಕೆರೆ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಚಿತ್ರ ತಂಡದ ವಿರುದ್ಧ ಸ್ವಯಂಪ್ರೇರಿತ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದ್ದಾರೆ. 
ನಾಗಶೇಖರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮಾಸ್ತಿಗುಡಿಗಾಗಿ ರವಿವರ್ಮಾ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಸಾಹಸಕ್ಕಾಗಿ ಅನಿಲ್ ಅವರು ಭಾರಿ ಕಸರತ್ತು ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT