ಅಂಬರೀಶ್ 
ಸಿನಿಮಾ ಸುದ್ದಿ

ಈಜು ಬರುವುದಿಲ್ಲ ಎಂದ ಮೇಲೆ ಇಷ್ಟು ದೊಡ್ಡ ರಿಸ್ಕ್ ತೆಗೆದುಕೊಳ್ಳಬಾರದಿತ್ತು: ಅಂಬರೀಶ್

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ...

ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಇಬ್ಬರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾದ ಹಿನ್ನೆಲೆ ನಟ ಮತ್ತು ಮಾಜಿ ಸಚಿವ ಅಂಬರೀಶ್ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿರುವ ಅಂಬರೀಶ್, ಈಗಿರುವ ಟೆಕ್ನಾಲಜಿಯಲ್ಲಿ ಇಂಥದ್ದೊಂದು ದೊಡ್ಡ ರಿಸ್ಕ್ ತೆಗೆದುಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.

ನಿನ್ನೆಯಿಂದ ಈ ಘಟನೆಗಳನ್ನೆಲ್ಲಾ ಟಿವಿಯಲ್ಲಿ ನೋಡುತ್ತಲೇ ಇದ್ದೇನೆ. ಈ ಘಟನೆಗಳಿಂದಾಗಿ ಎದೆ ಜಿಲ್ ಎಂದಿತ್ತು ಎಂದರು. ಇನ್ನು ಚಿತ್ರೀಕರಣ ವೇಳೆ ಅವರಿಬ್ಬರೂ ತಮಗೆ ಈಜು ಬರುವುದಿಲ್ಲ ಎಂದು ಮೇಲೆ ರಿಸ್ಕ್ ತೆಗೆದುಕೊಳ್ಳುವ ಅವಶ್ಯಕತೆ ಇರಲಿಲ್ಲ ಎಂದರು.

ಈಗ ಎಲ್ಲಾ ಮುಗಿದುಹೋಗಿದೆ. ಬೇರೆ ಘಟನೆಗಳಲ್ಲಾದರೆ ಏನಾದರೂ ಮಾಡಬಹುದಿತ್ತೇನೋ. ಆದರೆ, ನೋಡು ನೋಡುತ್ತಿದ್ದಂತೆಯೇ ಎಲ್ಲವೂ ಮುಗಿದು ಹೋಗಿದೆ. ಹಾಗಾಗಿ ಅವರಿಬ್ಬರ ಕುಟುಂಬದವರಿಗೆ ಸಮಾಧಾನ ಹೇಳದೆ ಬೇರೆ ದಾರಿ ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT