ಪವನ್ ಕಲ್ಯಾಣ್ 
ಸಿನಿಮಾ ಸುದ್ದಿ

2019 ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಪವನ್ ಕಲ್ಯಾಣ್ ಪ್ರಕಟಣೆ

2019 ರಲ್ಲಿ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ...

ಅನಂತಪುರ: 2019 ರಲ್ಲಿ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ  ಚಿತ್ರನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಪ್ರಕಟಿಸಿದ್ದಾರೆ.

ಗುರುವಾರ ಅನಂತಪುರದ ಸ್ಥಳೀಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಆದರೆ ಶಾಸಕ ಅಥವಾ ಸಂಸದ ಸ್ಥಾನಕ್ಕೆ ಸ್ಪರ್ಧಿಸುತ್ತಾರೋ ಎಂಬುದನ್ನು ಸ್ಪಷ್ಟ ಪಡಿಸಿಲ್ಲ. ಜನಸೇನಾ ಪಕ್ಷದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ತೆಲುಗು ದೇಶಂ ಪಕ್ಷ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನಂತಪುರದಲ್ಲಿ ಶೀಘ್ರವೇ ಪಕ್ಷದ ಕಚೇರಿ ಆರಂಭಿಸುತ್ತೇನೆ ಎಂದು ಪವನ್ ಕಲ್ಯಾಣ್ ತಿಳಿಸಿದರು. ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪವನ್ ಕಲ್ಯಾಣ್ ಅಭಿಮಾನಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್