ದುನಿಯಾ ವಿಜಯ್ 
ಸಿನಿಮಾ ಸುದ್ದಿ

'ಮಾಸ್ತಿ ಗುಡಿ' ನಿರ್ಮಾಪಕನ ಸಂಬಂಧಿ ಮೇಲೆ ಹಲ್ಲೆ, ದುನಿಯಾ ವಿಜಯ್ ಬಂಧನ, ಬಿಡುಗಡೆ

ಮಾಸ್ತಿ ಗುಡಿ' ದುರಂತ ಮಾಸುವ ಮುನ್ನವೇ ನಟ ದುನಿಯಾ ವಿಜಯ್ ಅವರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ...

ಬೆಂಗಳೂರು: 'ಮಾಸ್ತಿ ಗುಡಿ' ದುರಂತ ಮಾಸುವ ಮುನ್ನವೇ ನಟ ದುನಿಯಾ ವಿಜಯ್ ಅವರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ಮಾಸ್ತಿ ಗುಡಿ' ಚಿತ್ರದ ನಿರ್ಮಾಪಕನ ಸಂಬಂಧಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ವಿಜಯ್ ಅವರನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
‘ಮಾಸ್ತಿಗುಡಿ’ ನಿರ್ಮಾಪಕ ಸುಂದರ್ ಅವರ ಸಹೋದರ ಶಂಕರ್ ಪತ್ನಿಯ ತಂದೆ ಜಯರಾಮ್ ಎಂಬವರ ಮೇಲೆ ದುನಿಯಾ ವಿಜಯ್ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಜಯ್ ವಿರುದ್ಧ ಎಫ್ಐಆರ್  ದಾಖಲಿಸಿದ್ದಾರೆ. ಅಲ್ಲದೆ ವಿಚಾರಣೆಗಾಗಿ ವಿಜಯ್ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಬಳಿಕ ಸ್ಟೇಷನ್ ಬೇಲ್ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಿದ್ದಾರೆ.
ಹಲ್ಲೆಗೆ ಒಳಗಾದ ಜಯರಾಮ್ ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರು ತಿಂಗಳ ಹಿಂದೆ ಶಂಕರ್ ಅವರ ವಿವಾಹ ಜಯರಾಮ್ ಅವರ ಪುತ್ರಿ ಮಾನಸರ ಜೊತೆ ನಡೆದಿತ್ತು. ಆದರೆ ಮಗಳಿಗೆ ಕಿರುಕುಳ ನೀಡಿ ವರದಕ್ಷಿಣೆಗಾಗಿ ಪೀಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿಚಾರಿಸಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿರುವ ಮಗಳ ಮನೆಗೆ ತೆರಳಿದಾಗ ಅಲ್ಲಿದ್ದ ವಿಜಯ ನಮ್ಮ ಕುಟುಂಬದ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿ ಕೆನ್ನೆಗೆ ಮತ್ತು ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಿ ಚೆನ್ನಮ್ಮನಕೆರೆ ಅಚ್ಚು ಕಟ್ಟು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಾಸ್ತಿ ಗುಡಿ ತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಖಳ ನಟರಾದ ಉದಯ್ ಹಾಗೂ ಅನಿಲ್ ಮೃತಪಟ್ಟಿದ್ದು, ಅವರೊಂದಿಗೆ ನೀರಿಗೆ ಹಾರಿದ್ದ ನಾಯಕ ನಟ ದುನಿಯಾ ವಿಜಯ್ ಅವರನ್ನು ರಕ್ಷಿಸಲಾಗಿತ್ತು. ಈ ಸಂಬಂಧ ಚಿತ್ರದ ನಿರ್ಮಾಪಕ ಸುಂದರ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ನಟ ದುನಿಯಾ ವಿಜಯ್ ಅವರ ಮೇಲೂ ಕ್ರಮ ಕೈಗೊಳ್ಳಬೇಕಿತ್ತೆಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ, ವಿಜಯ್ ಈಗ ಬೇರೊಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?