ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳು ಆನ್ ಲೈನ್ ನಲ್ಲಿ ಬಿಡುಗಡೆ: ರಕ್ಷಿತ್ ಶೆಟ್ಟಿ

ಕನ್ನಡ ಸಿನಿಮಾ ರಂಗದಲ್ಲಿ ಸದಾ ಹೊಸತನಕ್ಕೆ ಹಾತೊರೆಯುವ ನಟ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆನ್ ಲೈನ್ ...

ಕಿರಿಕ್ ಪಾರ್ಟಿ
Shilpa D
Updated On : 15 Nov 2016, 2:19 am

ಬೆಂಗಳೂರು: ಕನ್ನಡ ಸಿನಿಮಾ ರಂಗದಲ್ಲಿ ಸದಾ ಹೊಸತನಕ್ಕೆ ಹಾತೊರೆಯುವ ನಟ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆನ್ ಲೈನ್ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಯಾವುದೇ ಕ್ಯಾಸೆಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಳ್ಳದೇ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆನ್ ಲೈನ್ ನಲ್ಲಿ ಬಿಡುಗಡೆ ಮಾಡುವುದಾಗಿ ನಟ, ನಿರ್ಮಾಪಕ ಹಾಗೂ ನಿರ್ದೆಶಕ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಇದುವರೆಗೂ ನಮ್ಮದು ಸ್ವಂತ ಪ್ರೊಡಕ್ಷನ್ ಹೌಸ್ ಇತ್ತು, ಸಿನಿಮಾ ನಿರ್ಮಾಣದ ಎಲ್ಲಾ  ವಲಯಗಳಿಗೂ ವಿಸ್ತರಿಸಬೇಕಾಗಿದೆ. ನಾವು ಯೂ ಟ್ಯೂಬ್ ಚಾನೆಲ್ ಆರಂಭಿಸಲು ನಿರ್ಧರಿಸಿದ್ದೇವೆ. ಅದರ ಮೊದಲ ಹಂತವಾಗಿ ಸಿನಿಮಾ ಟ್ರೇಲರ್ ರನ್ನು ಬಿಡುಗಡೆ ಮಾಡಿದ್ದವು. ಇದಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು, ಹೀಗಾಗಿ ಆನ್ ಲೈನ್ ನಲ್ಲಿ ಆಡಿಯೋ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಸಕ್ತ ಪರಿಸ್ಥಿತಿಯಲ್ಲಿ ಆಡಿಯೋ ಬಿಡುಗಡೆಗೆ ಉತ್ತಮವಾದ ಮಾರುಕಟ್ಟೆಯಿಲ್ಲ, ಹೀಗಾಗಿ ಕಿರಿಕ್ ಪಾರ್ಟಿ ಸಿನಿಮಾ ಹಾಡುಗಳನ್ನು ಆಲ್ ಲೈನ್ ನಲ್ಲಿ ಬಿಡುಗಡೆ ಮಾಡುವ ಪ್ರಯೋಗ ಮಾಡುತ್ತಿದ್ದೇವೆ. ಪರಮಾವ್ ಸ್ಟುಡಿಯೋದಲ್ಲಿ ಆಡಿಯೋ ಬಿಡುಗಡೆ ನಡೆಯಲಿದೆ.

ಸಿನಿಮಾದಲ್ಲಿ 10 ಹಾಡುಗಳಿವೆ. ಹಾಡುಗಳಿಗೆ ಬಿ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.ರಕ್ಷಿತ್ ಶೆಟ್ಟಿ ಸಾಹಿತ್ಯ ಮತ್ತು ನೃತ್ಯ  ನಿರ್ದೇಶನ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments