ಶಾರೂಖ್ ನಟನೆಯ ರಯೀಸ್ 
ಸಿನಿಮಾ ಸುದ್ದಿ

ಶಾರೂಖ್ ನಟನೆಯ ರಯೀಸ್ ಬಿಡುಗಡೆ ದಿನಾಂಕ ಮುಂದೂಡಿಕೆ ಇಲ್ಲ

ರಯೀಸ್ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗುತ್ತದೆ ಎಂಬ ವದಂತಿಗಳು ಕೇಳಿಬಂದಿದ್ದವು. ಆದರೆ ಈಗ ಚಿತ್ರದ ನಿರ್ದೇಶಕರು ಈ ಹಿಂದೆಯೇ ನಿಗದಿಯಾಗಿದ್ದ ದಿನಾಂಕದಂದು ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ರಯೀಸ್ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗುತ್ತದೆ ಎಂಬ ವದಂತಿಗಳು ಕೇಳಿಬಂದಿದ್ದವು. ಆದರೆ ಈಗ ಚಿತ್ರದ ನಿರ್ದೇಶಕರು ಈ ಹಿಂದೆಯೇ ನಿಗದಿಯಾಗಿದ್ದ ದಿನಾಂಕದಂದು ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. 
ಯಾವುದೇ ಬದಲಾವಣೆ ಮಾಡದೇ ಈ ಹಿಂದೆ ನಿಗದಿಯಾಗಿದ್ದ ದಿನಾಂಕದಂದೇ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರದ ನಿರ್ದೇಶಕರು ತೀರ್ಮಾನಿಸಿದ್ದಾರೆ ಎಂಬ ವರದಿಗಳು ಪ್ರಕಟವಾಗಿದೆ. ಶಾರೂಖ್ ಖಾನ್ ನಟನೆಯ ರಯೀಸ್ ಚಿತ್ರ ಜ.26 ರಂದು ಬಿಡುಗಡೆಯಾಗುತ್ತಿರುವ ಹೃತಿಕ್ ರೋಷನ್ ಅಭಿನಯದ ಕಾಬಿಲ್ ಚಿತ್ರದೊಂದಿಗಿನ ಬಾಕ್ಸ್ ಆಫೀಸ್ ಪೈಪೋಟಿಯನ್ನು ತಪ್ಪಿಸಲು ರಯೀಸ್ ಚಿತ್ರದ ಬಿಡುಗಡೆ ದಿನಾಂಕವನು ಮುಂದೂಡಲಾಗುತ್ತದೆ ಎಂಬ ವದಂತಿ ಹಬ್ಬಿತ್ತು. 
ಹೃತಿಕ್ ರೋಷನ್ ಅಭಿನಯದ ಕಾಬಿಲ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡುವುದನ್ನು ಪರಿಗಣಿಸಲು ಚಿತ್ರದ ನಿರ್ಮಾಪಕ ರಾಕೇಶ್ ರೋಷನ್ ಅವರೊಂದಿಗೆ ಮಾತನಾಡಿದ್ದಾಗಿ ಶಾರೂಖ್ ಖಾನ್ ಹೇಳಿದ್ದರು. ಆದರೆ ಬಿಡುಗಡೆ ದಿನಾಂಕವನ್ನು ಮುಂದೂಡಲು ರಾಕೇಶ್ ರೋಷನ್ ನಿರಾಕರಿಸಿದ್ದು, ಶಾರೂಖ್ ಖಾನ್, ಹೃತಿಕ್ ರೋಷನ್ ಅವರ ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಪೈಪೋಟಿ ನಡೆಯುವುದು ಅನಿವಾರ್ಯವೆಂಬಂತಹ ಸ್ಥಿತಿ ನಿರ್ಮಾಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ