ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮಾ 
ಸಿನಿಮಾ ಸುದ್ದಿ

ಮಾಸ್ತಿ ಗುಡಿ ದುರಂತ: ಐವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ...

ರಾಮನಗರ: ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ ನಿರ್ದೇಶಕ, ಸಾಹಸ ನಿರ್ದೇಶಕ ಹಾಗೂ ಯುನಿಟ್ ಮ್ಯಾನೇಜರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 3ರ ವರೆಗೆ ವಿಸ್ತರಿಸಲಾಗಿದೆ.
ಮಾಸ್ತಿ ಗುಡಿ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಿರ್ದೇಶಕ ನಾಗಶೇಖರ್‌, ಸಾಹಸ ನಿರ್ದೇಶಕ ರವಿವರ್ಮ, ಸಹ ನಿರ್ದೇಶಕ ಸಿದ್ದು, ನಿರ್ಮಾಪಕ ಸುಂದರ್ ಪಿ.ಗೌಡ ಹಾಗೂ ಯುನಿಟ್ ಮ್ಯಾನೇಜರ್ ಭರತ್ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಜೆಎಂಎಫ್‌ಸಿ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಮಾಗಡಿ ತಾಲೂಕಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ರಾಮನಗರದ 3ನೇ ಹೆಚ್ಚುವರಿ ನ್ಯಾಯಾಧೀಶ ಗೋಪಾಲಕೃಷ್ಣ ಅವರು, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದ್ದಾರೆ. 
ಈ ಮಧ್ಯೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ನಾಳೆಗೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT