ಕಲಬುರ್ಗಿ: ಭಾರತದಲ್ಲಿ ಪಾಕಿಸ್ತಾನದ ಕಲಾವಿದರಿಗೆ ನಿಷೇಧ ಹೇರಬೇಕು ಎಂಬ ಪ್ರಸ್ತಾಪಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಬುಧವಾರ ಬೆಂಬಲ ಸೂಚಿಸಿದ್ದಾರೆ.
ಇಂದು ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವರ್ ಸ್ಟಾರ್, ಕಲೆಗಿಂತ ದೇಶ ದೊಡ್ಡದು. ನಾವೆಲ್ಲ ಮೊದಲು ಭಾರತೀಯರು, ನಂತರ ಕಲಾವಿದರು. ದೇಶಕ್ಕೆ ಒಳ್ಳೆಯದಾಗುವ ಕೆಲಸಕ್ಕೆ ನಮ್ಮ ಸಹಮತ ಇದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾವೇರಿ ಮಾತ್ರವಲ್ಲ, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆಯೂ ನಾವು ಹೋರಾಟ ಮಾಡಿದ್ದೇವೆ. ಉತ್ತರ ಕರ್ನಾಟಕದ ಬಗ್ಗೆ ಕನ್ನಡ ಚಿತ್ರರಂಗ ನಿರ್ಲಕ್ಷ ಮಾಡಿಲ್ಲ. ಕನ್ನಡಿಗರೆಲ್ಲಾ ಒಂದೇ, ನಾವೆಲ್ಲಾ ಒಂದೇ ತಾಯಿ ಮಕ್ಕಳು ಎಂದು ದೊಡ್ಮನೆ ಹುಡುಗ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ್ದ ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ.