ಫಿಕ್ಸ್ ಆಯ್ತು ಯಶ್, ರಾಧಿಕಾ ಪಂಡಿತ್ ಮದುವೆ ದಿನಾಂಕ! 
ಸಿನಿಮಾ ಸುದ್ದಿ

ಫಿಕ್ಸ್ ಆಯ್ತು ಯಶ್, ರಾಧಿಕಾ ಪಂಡಿತ್ ಮದುವೆ ದಿನಾಂಕ!

ವರಮಹಾಲಕ್ಷ್ಮೀ ಹಬ್ಬದ ದಿನದಂದು ನಿಶ್ಚಿತಾರ್ಥ ಸಮಾರಂಭವನ್ನು ಅದ್ದೂರಿಯಾಗಿ ಗೋವಾದಲ್ಲಿ ಆಚರಿಸಿಕೊಂಡಿದ್ದ ಯಶ್ ಮತ್ತು ರಾಧಿಕಾ ಪಂಡಿತ್ ಅವರು, ಡಿಸೆಂಬರ್ ತಿಂಗಳಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ...

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ದಿನದಂದು ನಿಶ್ಚಿತಾರ್ಥ ಸಮಾರಂಭವನ್ನು ಅದ್ದೂರಿಯಾಗಿ ಗೋವಾದಲ್ಲಿ ಆಚರಿಸಿಕೊಂಡಿದ್ದ ಯಶ್ ಮತ್ತು ರಾಧಿಕಾ ಪಂಡಿತ್ ಅವರು, ಡಿಸೆಂಬರ್ ತಿಂಗಳಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆಂದು ಹೇಳಲಾಗುತ್ತಿದೆ.

ಈಗಾಗಲೇ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಮದುವೆ ದಿನಾಂಕ ನಿಗದಿಯಾಗಿದ್ದು, ಮೂಲಗಳು ತಿಳಿಸಿರುವ ಪ್ರಕಾರ ಇದೇ ಡಿಸೆಂಬರ್ 10 ಮತ್ತು 11 ರಂದು ಯಶ್ ಮತ್ತು ರಾಧಿಕಾ ಪಂಡಿತ್ ಹಸೆಮಣೆ ಏರಲಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಹೇಳಿದಂತೆಯೇ ಮದುವೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಆದರೆ, ಮದುವೆ ದಿನಾಂಕ ನಿಗದಿಯಾಗಿರುವ ಕುರಿತಂತೆ ಯಶ್ ಕುಟುಂಬಸ್ಥರಾಗಲೀ ಅಥವಾ ರಾಧಿಕಾ ಪಂಡಿತ್ ಅವರ ಕುಟುಂಬಸ್ಥರಾಗಲೀ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

ಯಶ್-ರಾಧಿಕಾ ಜೊತೆಯಾಗಿ ನಟಿಸಿರುವ 'ಸಂತು ಸ್ಟೈಟ್ ಫಾರ್ವರ್ಡ್' ಚಿತ್ರ ಇದೇ ಅಕ್ಟೋಬರ್ 28ರಂದು ತೆರೆಗೆ ಬರಲು ಸಿದ್ಧವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್