ಯಶ್ 
ಸಿನಿಮಾ ಸುದ್ದಿ

ಕಾವೇರಿ ಹೋರಾಟ: ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಿಗೆ ನಾರ್ವೆಯಿಂದ ಯಶ್ ಮನವಿ

ರಾಜಧಾನಿ ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡು ಕರ್ಫ್ಯೂ ವಿಧಿಸಲಾಗಿದೆ. ನಟ ಯಶ್ ಪ್ರತಿಭಟನಾಕಾರರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ  ಕಾವೇರಿ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡು ಕರ್ಫ್ಯೂ ವಿಧಿಸಲಾಗಿದೆ. ಮತ್ತೆ ಹಲವೆಡೆ ಪ್ರತಿಭಟನೆ ಮುಂದುವರಿದಿದ್ದು, ನಟ ಯಶ್ ಪ್ರತಿಭಟನಾಕಾರರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ನಾರ್ವೆಯಲ್ಲಿ ಸಂತು ಸ್ಟ್ರೈಟ್ ಫಾರ್ವಡ್ ಚಿತ್ರದ ಶೂಟಿಂಗ್ ನಲ್ಲಿ ಇರುವ ಯಶ್ ಅಲ್ಲಿಂದಲೇ ಪ್ರತಿಭಟನಕಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಕಾವೇರಿಗಾಗಿ ಶಾಂತಿಯುತ ಪ್ರತಿಭಟನೆಗೆ ಮುಂದಾಗಿ ಎಂದಿದ್ದಾರೆ. ಶಾಂತಿಯಿಂದ ನಡೆದುಕೊಳ್ಳಿ ನಾವು ಕನ್ನಡಿಗರು, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು,  ಬೆಂಕಿ ಹಚ್ಚುವುದು ಹಾಗೂ ಹೊಡೆಯುವುದರಿಂದ ಯಾರಿಗೂ ಪ್ರಯೋಜನವಿಲ್ಲ ಅಂತಾ ಯಶ್ ಪ್ರತಿಭಟನಕಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೆಚ್ಚುವಂತೆ ಪೋಸ್ಟ್ ಗಳನ್ನು ಹಾಕಬೇಡಿ, ಯಾರನ್ನು ದಾರಿ ತಪ್ಪಿಸ ಬೇಡಿ. ಹಿಂಸೆಯಿಂದ ಯಾವುದೇ ಪ್ರಯೋಜನವಿಲ್ಲ. ತಮಿಳುನಾಡಿನಲ್ಲಿರುವ ಕನ್ನಡಿಗರ ಬಗ್ಗೆ ಯೋಚನೆ ಮಾಡಿ. ನೀವು ಇಲ್ಲಿ ಅವರ ಮೇಲೆ ಹಲ್ಲೆ ಮಾಡಿದರೆ ಅವರು ನಮ್ಮವರ ಮೇಲೆ ದಾಳಿ ಮಾಡುತ್ತಾರೆ ಇದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಮನವಿ ಮಾಡಿರುವ ವಿಡಿಯೋ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್