ಬೆಂಗಳೂರು: ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬಳಿಗೆ ತೆರಳಲು ಕನ್ನಡ ಚಿತ್ರರಂಗ ಚಿಂತನೆ ನಡೆಸಿದೆ ಎಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ಕಾವೇರಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಂತೆ ಮನವಿ ಮಾಡಲಾಗುವುದು. ಜತೆ ಕೆಆರ್ಎಸ್ ಗೆ ಸಿನಿಮಾದ ಎಲ್ಲಾ ಕಲಾವಿದರು, ತಂತ್ರಜ್ಞರು ಭೇಟಿ ನೀಡುವ ಕುರಿತಂತೆ ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನಾವು ಕನ್ನಡಿಗರು ಶಾಂತಿಪ್ರಿಯರು, ಶಾಂತ ರೀತಿಯಲ್ಲಿ ಹೋರಾಟ ಮಾಡೋಣ. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟವುಂಟು ಮಾಡುವುದು ಬೇಡ. ನಮಗಾಗಿರುವ ಅನ್ಯಾಯವನ್ನು ಶಾಂತ ರೀತಿಯಲ್ಲಿ ಪ್ರತಿಭಟಿಸುವ ಮೂಲಕ ನ್ಯಾಯ ದೊರಕಿಸಿಕೊಡುವಂತೆ ಹೋರಾಡೋಣ ಎಂದು ಶಿವರಾಜ್ ಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದಾರೆ.