ಭಾಷೆ ತಿಳಿಯದೇ, ಮಂಗಗಳಾಗಿದ್ದಾಗಲೂ ಕಾವೇರಿ ಹರಿಯುತ್ತಿತ್ತು, ಮುಂದೆಯೂ ಹರಿಯುತ್ತದೆ: ಕಮಲ್ ಹಾಸನ್
ಕಾವೇರಿ ನದಿ ನೀರಿನ ಹಂಚಿಕೆ ವಿಷಯವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಏರ್ಪಟ್ಟಿರುವ ಹೋರಾಟದ ಬಗ್ಗೆ ಹಿರಿಯ ನಟ ಕಮಲ್ ಹಾಸನ್ ಟ್ವೀಟ್ ...
ಚೆನ್ನೈ: ಕಾವೇರಿ ನದಿ ನೀರಿನ ಹಂಚಿಕೆ ವಿಷಯವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಏರ್ಪಟ್ಟಿರುವ ಹೋರಾಟದ ಬಗ್ಗೆ ಹಿರಿಯ ನಟ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ನಮಗೆ ಭಾಷೆ ತಿಳಿಯದೇ, ನಾವು ಮಂಗಗಳಾಗಿದ್ದಾಗಿನಿಂದಲೂ ಕಾವೇರಿ ಹರಿಯುತ್ತಿದೆ, ನಮ್ಮ ನಂತರವೂ ಕಾವೇರಿ ಹರಿಯುತ್ತಲೇ ಇರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ಇತಿಹಾಸವನ್ನು ಮುಂದಿನ ದಿನಗಳಲ್ಲಿ ಕನ್ನಡಿಯಲ್ಲಿ ನೋಡಿಕೊಂಡರೇ ನಮಗೆ ನಾಚಿಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ತಮಿಳುನಾಡಿಗೆ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಉಂಟಾದ ಗಲಭೆ, ಹಿಂಸಾಚಾರವನ್ನು ಅವರು ಖಂಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.