ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ 
ಸಿನಿಮಾ ಸುದ್ದಿ

ಜಯಲಲಿತಾ ಶೀಘ್ರ ಗುಣಮುಖರಾಗಲು ಹಾರೈಸಿದ ರಜನಿಕಾಂತ್ ಮತ್ತು ಕಮಲಹಾಸನ್

ದೇಹದಲ್ಲಿ ನೀರಿನ ಅಂಶದ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಶೀಘ್ರ ಗುಣಮುಖರಾಗಲು ಸೂಪರ್ಸ್ಟಾರ್

ಚೆನ್ನೈ: ದೇಹದಲ್ಲಿ ನೀರಿನ ಅಂಶದ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಶೀಘ್ರ ಗುಣಮುಖರಾಗಲು ಸೂಪರ್ಸ್ಟಾರ್ ರಜನಿಕಾಂತ್ ಮತ್ತು ನಟ-ನಿರ್ದೇಶಕ ಕಮಲ ಹಾಸನ್ ಹಾರೈಸಿದ್ದಾರೆ. 
ಗುರುವಾರ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರನ್ನು ವೀಕ್ಷಣೆಯಲ್ಲಿಟ್ಟಿದ್ದು, ಸಾಮಾನ್ಯವಾದ ಆಹಾರ ಸೇವಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. 
ರಜನಿಕಾಂತ್ ಮತ್ತು ಕಮಲ್, ಮುಖ್ಯಮಂತ್ರಿಗಳು ಶೀಘ್ರ ಗುಣಮುಖರಾಗಲೆಂದು ಟ್ವಿಟ್ಟರ್ ನಲ್ಲಿ ಹಾರೈಸಿದ್ದಾರೆ.
"ಆತ್ಮೀಯ ಮುಖ್ಯಮಂತ್ರಿಯವರೇ, ನೀವು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ರಜನಿಕಾಂತ್ ಶನಿವಾರ ಟ್ವೀಟ್ ಮಾಡಿದ್ದಾರೆ. 
"ಗೌರವಾನ್ವಿತ ತಮಿಳುನಾಡಿನ ಮುಖ್ಯಮಂತ್ರಿ ಶೀಘ್ರ ಗುಣಮುಖರಾಗಲೆಂದು ಹಾರೈಸುತ್ತೇನೆ" ಎಂದು ಕಮಲ್ ಬರೆದಿದ್ದಾರೆ. 
"ಮುಖ್ಯಮಂತ್ರಿಯವರಿಗೆ ಜ್ವರ ಇಲ್ಲ ಅವರು ಸಾಮಾನ್ಯ ಆಹಾರ ಸೇವಿಸುತ್ತಿದ್ದಾರೆ" ಎಂದು ಆಸ್ಪತ್ರೆ ಗುರುವಾರ ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ಅವರು ಆಸ್ಪತ್ರೆಯಿಂದ ಮನೆಗೆ ಯಾವಾಗ ಬರಲಿದ್ದಾರೆ ಎಂಬ ವಿಷಯ ತಿಳಿದಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!