ಟಾಲಿವುಡ್ ಯಂಗ್ ಟೈಗರ್ ಜೂನಿಯರ್ ಎನ್‌ಟಿಆರ್ ಅಭಿನಯದ ಜೈ ಲವಕುಶ ಚಿತ್ರದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದುನಿಯಾ ವಿಜಯ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾಸ್ತಿಗುಡಿ ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿರುವ ದುನಿಯಾ ವಿಜಯ್ ಇದೀಗ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ. ನಟ ಕಲ್ಯಾಣ್ ರಾಮ್ ನಿರ್ಮಾಣದ ಜೈ ಲವಕುಶ ಚಿತ್ರವನ್ನು ಬಾಬಿ ಎಂಬುವರು ನಿರ್ದೇಶಿದ್ದು ಈ ಚಿತ್ರಕ್ಕೆ ದುನಿಯಾ ವಿಜಯ್ ಗೆ ಖಡಕ್ ವಿಲನ್ ಆಗಿ ಆಯ್ಕೆ ಮಾಡಿದ್ದಾರೆ ಎಂದು ಚಿತ್ರ ತಂಡದ ಮೂಲಗಳಿಂದ ತಿಳಿದುಬಂದಿದೆ.
ಶ್ರೀರಾಮನವಮಿ ಹಬ್ಬದಂದು ಎನ್‌ಟಿಆರ್ ತಮ್ಮ ಫೇಸ್ ಬುಕ್ ಖಾತೆ ಮೂಲಕ ಚಿತ್ರದ ಮೋಷನ್ ಪಿಕ್ಚರ್ ಬಿಡುಗಡೆ ಮಾಡಿದರು.