ಚಿತ್ರತಂಡವನ್ನು ಅಭಿನಂದಿಸುತ್ತಿರುವ ಸಿಎಂ 
ಸಿನಿಮಾ ಸುದ್ದಿ

`ರಾಜಕುಮಾರ’ನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಇತ್ತೀಚಿಗಷ್ಟೆ ತೆರಕಂಡ ಪವರ್ ಸ್ಟಾರ್ ಪುನೀತ್‌ ರಾಜ್‌ ಕುಮಾರ್ ಅಭಿನಯದ `ರಾಜಕುಮಾರ’ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ...

ಬೆಂಗಳೂರು: ಇತ್ತೀಚಿಗಷ್ಟೆ ತೆರಕಂಡ ಪವರ್ ಸ್ಟಾರ್ ಪುನೀತ್‌ ರಾಜ್‌ ಕುಮಾರ್ ಅಭಿನಯದ `ರಾಜಕುಮಾರ’ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮನ್ನು ಭೇಟಿ ಚಿತ್ರ ತಂಡವನ್ನು ಅಭಿನಂದಿಸಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ನಾಯಕ ನಟ ಪುನೀತ್‌ ರಾಜ್‌ ಕುಮಾರ್, ಚಿತ್ರದ ನಿರ್ದೇಶಕ ಆನಂದ್ ಸಂತೋಷ್ ರಾಮ್, ನಿರ್ಮಾಪಕ ವಿಜಯ್ ಕಿರಂಗದ್ದೂರು ಅವರನ್ನು ಸಿಎಂ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜಕುಮಾರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.
ಇದಕ್ಕೆ ಪ್ರತಿಯಾಗಿ ಪುನೀತ್‌ರಾಜ್‌ಕುಮಾರ್, ಚುನಾವಣೆ ಸೇರಿದಂತೆ ಇನ್ನಿತರ ಕೆಲಸ-ಕಾರ್ಯದ ಒತ್ತಡದ ನಡುವೆಯೂ ರಾಜಕುಮಾರ ಚಿತ್ರ ನೋಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಸಿದ್ದರಾಮಯ್ಯ ಅವರು ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆಯ ಚುನಾವಣೆಯ ಜಂಜಾಟ, ಒತ್ತಡದ ನಡುವೆಯೂ ನಿನ್ನೆ ಬಿಡುವು ಮಾಡಿಕೊಂಡು ಮೈಸೂರಿನಲ್ಲಿ ರಾಜಕುಮಾರ ಚಿತ್ರ ವೀಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್‌ರಾಜ್‌ಕುಮಾರ್ ಹಾಗೂ ಅವರ ತಂಡವನ್ನು ಮನೆಗೆ ಕರೆಸಿಕೊಂಡು ಅಭಿನಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!