ಸತ್ಯರಾಜ್-ಕಮಲ್ ಹಾಸನ್ 
ಸಿನಿಮಾ ಸುದ್ದಿ

ಕನ್ನಡಿಗರ ವಿರುದ್ಧದ ಹೇಳಿಕೆಗೆ ವಿಷಾದ: ಸತ್ಯರಾಜ್ ಪ್ರಶಂಸಿಸಿದ ಕಮಲ್ ಹಾಸನ್

ಒಂಬತ್ತು ವರ್ಷಗಳ ಹಿಂದೆ ಕಾವೇರಿ ವಿವಾದದ ಸಂದರ್ಭದಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ತಮಿಳು ನಟ ಸತ್ಯರಾಜ್ ತನ್ನ ಹೇಳಿಕೆಗೆ ವಿಷಾದ...

ಒಂಬತ್ತು ವರ್ಷಗಳ ಹಿಂದೆ ಕಾವೇರಿ ವಿವಾದದ ಸಂದರ್ಭದಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ತಮಿಳು ನಟ ಸತ್ಯರಾಜ್ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿರುವುದಕ್ಕೆ ನಟ ಕಮಲ್ ಹಾಸನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 
ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಅದರ ಗಂಭೀರತೆಯನ್ನು ಅರಿತ ಸತ್ಯರಾಜ್ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಮೂಲಕ ಮಹಾನ್ ಮನುಷ್ಯ ಎನಿಸಿಕೊಂಡಿದ್ದಾರೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. 
ಎಸ್ಎಸ್ ರಾಜಮೌಳಿ ಅವರ ಕನಸಿನ ಕೂಸು ಬಾಹುಬಲಿ 2 ಚಿತ್ರದಲ್ಲಿ ಸತ್ಯರಾಜ್ ಕಟ್ಟಪ್ಪ ಪಾತ್ರದಲ್ಲಿ ಅಭಿನಯಸಿದ್ದಾರೆ. ಕಳೆದ 9 ವರ್ಷಗಳ ಹಿಂದೆ ಸತ್ಯರಾಜ್ ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸತ್ಯರಾಜ್ ಕನ್ನಡಿಗರನ್ನು ಕ್ಷಮಾಪಣೆ ಕೇಳಬೇಕು. ಇಲ್ಲದಿದ್ದರೆ ಬಾಹುಬಲಿ 2 ಚಿತ್ರ ಕರ್ನಾಟಕದಲ್ಲಿ ತೆರೆ ಕಾಣಲು ಬಿಡುವುದಿಲ್ಲ ಎಂದು ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿದ್ದವು. ಹೀಗಾಗಿ ಸತ್ಯರಾಜ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT