ಮುಂಬೈ; ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್'ನ ಹಿರಿಯ ನಟ ದಿಲೀಪ್ ಕುಮಾರ್ (94) ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಬುಧವಾರ ದಾಖಲು ಮಾಡಲಾಗಿದೆ.
ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ ನಿರ್ಜಲೀಕರಣಕ್ಕೊಳಗಾಗಿದ್ದರು. ಈ ವೇಳೆ ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಪದೇ-ಪದೇ ಅನಾರೋಗ್ಯಕ್ಕೊಳಗಾಗುತ್ತಿರುವ ದಿಲೀಪ್ ಕುಮಾರ್ ಕಳೆದೆರಡು ವರ್ಷಗಳಿಂದ ಮನೆಯಿಂದ ಆಸ್ಪತ್ರೆಗೆ ಮತ್ತು ಆಸ್ಪತ್ರೆಯಿಂದ ಮನೆಗೆ ದಾಖಲಾಗುತ್ತಲೇ ಇದ್ದಾರೆ, ಕಾಲು ಊತ ಮತ್ತು ಜ್ವರದಿಂದ ಬಳಲುತ್ತಿದ್ದ ಅವರು ಕಳೆದ ವರ್ಷ ಡಿಸೆಂಬರ್ ನಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.