ಮಹಿಳೆಗೆ ಲೈಂಗಿಕ ಕಿರುಕುಳ: ಗಾಯಕ ಯಶ್ ವಾಡಾಲಿ ಬಂಧನ
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಗಾಯಕ ಯಶ್ ವಾಡಾಲಿ ಅವರನ್ನು ಮುಂಬೈ ಪೊಲೀಸರು ...
ಮುಂಬೈ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಗಾಯಕ ಯಶ್ ವಾಡಾಲಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
39 ವರ್ಷದ ಮಹಿಳೆಯೊಬ್ಬರು ಗಾಯಕ ಯಶ್ ವಾಡಾಲಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ಬಗ್ಗೆ ಬನಗೂರ್ ನಗರ ಪೊಲೀಸ್ ಠಾಣೆಯಲ್ಲಿ ಯಶ್ ವಿರುದ್ಧ ಮಹಿಳೆ ಬುಧವಾರ ದೂರು ನೀಡಿದ್ದಾರೆ. ಗೋರೆಗಾಂವ್ ವೆಸ್ಟ್ ನಿವಾಸದಲ್ಲಿ ಗಾಯಕ ಯಶ್ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗುರುವಾರ ರಾತ್ರಿ ಯಶ್ರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ದಿನ್ದೋಶಿ ಸೆಷನ್ ಕೋರ್ಟ್ಗೆ ಅವರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಇನ್ನು, ಮಹಿಳೆಯ ದೂರಿನ್ವಯ ಯಶ್ ವಿರುದ್ಧ ಐಪಿಸಿ ಸೆಕ್ಷನ್ 354 ಹಾಗೂ 504ರಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.