ನಟ ಜಗ್ಗೇಶ್ 
ಸಿನಿಮಾ ಸುದ್ದಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪರ ಹೇಳಿಕೆ; ಆಕ್ರೋಶದ ಬಳಿಕ ಟ್ವೀಟ್ ಡಿಲೀಟ್ ಮಾಡಿದ ನಟ ಜಗ್ಗೇಶ್!

ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ನಟ ಜಗ್ಗೇಶ್ ಅವರು ಮಾಡಿರುವ ಟ್ವೀಟ್ ವೊಂದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ...

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ನಟ ಜಗ್ಗೇಶ್ ಅವರು ಮಾಡಿರುವ ಟ್ವೀಟ್ ವೊಂದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. 
ನಾಯ್ಡು ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು, 'ಕರ್ನಾಟಕದಲ್ಲಿ ಅವರನ್ನ ಭಾಷಾ ಭಾವನೆಯಲ್ಲಿ ರಾಜ್ಯಸಭೆಗೆ ಅಕ್ಷೇಪಿಸಿದರು. ಆದರೆ, ಇಂದು ಭಾರತಕ್ಕೆ ಉಪ ರಾಷ್ಟ್ರಪತಿ. ಬಾರದು ಬಪ್ಪದು...ಬಪ್ಪದು...ತಪ್ಪದು...ಇದೇ ದೇವರ ಲೀಲೆ ಎಂದು ಟ್ವೀಟ್ ಮಾಡಿದ್ದಾರೆ. 
ಜಗ್ಗೇಶ್ ಅವರು ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಹಲವು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವರು ಇದು ಕನ್ನಡಿಗರಿಗೆ ಮಾಡಿದ ಅಪಮಾನವೆಂದು ಕಟುವಾಗಿ ಟೀಕಿಸಿದ್ದಾರೆ.
ನಾಯ್ಡು ಅವರ ಕುರಿತಂತೆ ಮಾಡಿದ ಈ ಟ್ವೀಟ್ ಗೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಲು ಮುಂದಾದ ಹಿನ್ನಲೆಯಲ್ಲಿ ಜಗ್ಗೇಶ್ ಅವರು ಇದೀಗ ಟ್ವೀಟ್ ತೆಗೆದು ಹಾಕಿದ್ದಾರೆ. 
ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅವರು ಕರ್ನಾಟಕದಿಂದ ಅಭ್ಯರ್ಥಿಯಾಗಲು ಕನ್ನಡ ಪರ ಸಂಘಟನೆಗಳ ಟ್ವಿಟರ್'ನಲ್ಲಿ 'ಗೋ ವೆಂಕಯ್ಯ ಎಂದು ಆಂದೋಲವನ್ನೇ ಆರಂಭಿಸಿದ್ದರು. ನಂತರ ಬಿಜೆಪಿ ನಿರ್ಮಲಾ ಸೀತಾರಾಮನ್ ಅವರನ್ನು ಅಭ್ಯರ್ಥಿಯನ್ನಾಗಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸ್ಟಿಂಗ್‌ ಆಪರೇಷನ್‌ ರೂವಾರಿ, ರೌಡಿಶೀಟರ್‌ ಫೋಟೋ ರಿಲೀಸ್‌ ಮಾಡಿದ ಕುಮಾರಸ್ವಾಮಿ!

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video