ನಟ ದಿಲೀಪ್ 
ಸಿನಿಮಾ ಸುದ್ದಿ

ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್ ನ್ಯಾಯಾಂಗ ಬಂಧನ ವಿಸ್ತರಣೆ

ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ...

ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಲೆಯಾಳಂ ನಟ ದಿಲೀಪ್ ಅವರ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಕೇರಳದ ಅಂಗಮಾಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆಗಸ್ಟ್ 22ರ ವರೆಗೆ ವಿಸ್ತರಿಸಿದೆ.
ಪೊಲೀಸ್ ವಶದಲ್ಲಿದ್ದ ನಟ ದಿಲೀಪ್ ಅವರನ್ನು ಜುಲೈ 14ರಂದು ಪೊಲೀಸರು ಅಂಗಮಾಲಿ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಮತ್ತೆ ದಿಲೀಪ್ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ.
ಕಳೆದ ಫೆಬ್ರವರಿಯಲ್ಲಿ ನಡೆದ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ಜುಲೈ 11ರಂದು ಬಂಧನಕ್ಕೀಡಾದ ದಿಲೀಪ್ ಅವರನ್ನು ಮಲಯಾಳಂ ಚಿತ್ರರಂಗದ ಕಲಾವಿದರ ಒಕ್ಕೂಟ(ಅಮ್ಮಾ)ದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.
ಪ್ರಕರಣದ ಸಾಕ್ಷಿಗಳ ಮೇಲೆ ನಟ ಪ್ರಭಾವ ಬೀರಿರುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!