ಸಿನಿಮಾ ಸುದ್ದಿ

ರಾಜು ಕನ್ನಡ ಮೀಡಿಯಂ ಚಿತ್ರದಲ್ಲಿ ಸ್ಟೈಲಿಷ್ ಲುಕ್‌ನಲ್ಲಿ ಸುದೀಪ್

Vishwanath S
ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ರಾಜು ಕನ್ನಡ ಮೀಡಿಯಂ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದು ಈ ಚಿತ್ರದಲ್ಲಿ ಸುದೀಪ್ ಸಖತ್ ಸ್ಟೈಲಿಷ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. 
ಸ್ಯಾಂಡಲ್ವುಡ್ ನ ಟ್ರೇಂಡ್ ಸೆಟ್ಟರ್ ನಟ ಸುದೀಪ್ ಅವರು ರಾಜು ಕನ್ನಡ ಮೀಡಿಯಂ ಚಿತ್ರದಲ್ಲಿ ಸ್ಟೈಲಿಷ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸುದೀಪ್ ಅವರ ಪಾತ್ರವೇನು ಎಂಬುದು ಬಹಿರಂಗವಾಗಿಲ್ಲ. 
ಸುದೀಪ್ ಬ್ಲಾಕ್ ಡ್ರೆಸ್ ನಲ್ಲಿ ಗಾಲ್ಫ್ ಆಡುತ್ತಿದ್ದು ಸಿರಿಯಸ್ ಆಗಿ ನಿಂತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುದೀಪ್ ಸ್ಟೈಲ್ ಬಗ್ಗೆಯು ಸಹ ಅಭಿಮಾನಿಗಳು ಮಾತನಾಡುತ್ತಿದ್ದಾರೆ. 
ಚಿತ್ರವನ್ನು ಫಸ್ಟ್ ರ್ಯಾಂಕ್ ರಾಜು ಚಿತ್ರವನ್ನು ನಿರ್ದೇಶಿಸಿದ್ದ ನರೇಶ್ ಕುಮಾರ್ ಅವರೇ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇಲ್ಲಿ ಗುರುನಂದನ್ ಗೆ ಅವಂತಿಕ ಶೆಟ್ಟಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. 
SCROLL FOR NEXT