ಸಾಹೇಬ ಚಿತ್ರದಲ್ಲಿ ಮನೋರಂಜನ್ ಮತ್ತು ಶಾನ್ವಿ ಶ್ರೀವಾಸ್ತವ 
ಸಿನಿಮಾ ಸುದ್ದಿ

ಗಣೇಶ ಹಬ್ಬಕ್ಕೆ ಬರಲಿದ್ದಾನೆ ಸಾಹೇಬ

ಗಣೇಶ ಹಬ್ಬಕ್ಕೆ ಮುಗುಳು ನಗೆ, ಭಜರಂಗಿ ಚಿತ್ರಗಳ ಬಿಡುಗಡೆ ಮುಂದಕ್ಕೆ ಹೋಗಿದ್ದು ರವಿಚಂದ್ರನ್ ಪುತ್ರ ಮನೋರಂಜನ್....

ಗಣೇಶ ಹಬ್ಬಕ್ಕೆ ಮುಗುಳು ನಗೆ, ಭಜರಂಗಿ ಚಿತ್ರಗಳ ಬಿಡುಗಡೆ ಮುಂದಕ್ಕೆ ಹೋಗಿದ್ದು ರವಿಚಂದ್ರನ್ ಪುತ್ರ ಮನೋರಂಜನ್ ನಟಿಸಿರುವ ಚೊಚ್ಚಲ ಚಿತ್ರ ಸಾಹೇಬ ಮುಂದಿನ ವಾರ ಗಣೇಶ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ನಿನ್ನೆ ಚಿತ್ರ ವೀಕ್ಷಿಸಿದ್ದ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಒಪ್ಪಿಗೆ ನೀಡಿದೆ.
ತಯಾರಿಗೆ ಹೆಚ್ಚು ಸಮಯ ತೆಗೆದುಕೊಂಡಿದ್ದ ಚಿತ್ರತಂಡ ಜೂನ್ ನಲ್ಲಿ ಚಿತ್ರ ಬಿಡುಗಡೆಗೊಳಿಸುವ ಯೋಜನೆ ಹಾಕಿಕೊಂಡಿತ್ತು. ಆದರೆ ಪ್ರಾಣಿ ಸೆನ್ಸಾರ್ ಮಂಡಳಿಯಿಂದ ಚಿತ್ರದಲ್ಲಿ ಆನೆ ಬಳಸಿದ್ದಕ್ಕೆ ಒಪ್ಪಿಗೆ ಸಿಗಲು ತಡವಾದ್ದರಿಂದ ಬಿಡುಗಡೆ ವಿಳಂಬವಾಯಿತು. ಇದೀಗ ಎಲ್ಲಾ ವಿಘ್ನಗಳನ್ನು ನಿವಾರಿಸಿ ಸಾಹೇಬ ಇದೇ 25ರಂದು ತೆರೆಗೆ ಬರುತ್ತಿದೆ.
ಜಯಣ್ಣ ಕಂಬೈನ್ಸ್ ಅಡಿ ತಯಾರಾದ ಚಿತ್ರಕ್ಕೆ ನಿರ್ದೇಶಕ ಭರತ್ ಆಕ್ಷನ್, ಕಟ್ ಹೇಳಿದ್ದಾರೆ. ಅವರು ಶ್ರೀಮುರಳಿ ನಟನೆಯ ಕಾಂತಿ ಚಿತ್ರದ ನಂತರ ಸಾಹೇಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ ನಟಿಸಿದ್ದು ವಿ.ಹರಿಕೃಷ್ಣ ಅವರ ಸಂಗೀತ ಮತ್ತು ಜಿಎಸ್ ವಿ ಸೀತಾರಾಮ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT