ನಿರೂಪ್ ಭಂಡಾರಿ, ಆರ್ಯ, ಅನೂಪ್ ಭಂಡಾರಿ 
ಸಿನಿಮಾ ಸುದ್ದಿ

ರಾಜರಥದ ಮೂಲಕ ಕನ್ನಡಕ್ಕೆ ತಮಿಳು ನಟ ಆರ್ಯ ಎಂಟ್ರಿ

ರಂಗೀತರಂಗ ಖ್ಯಾತಿಯ ಭಂಡಾರಿ ಬ್ರದರ್ಸ್ ಅವರ ಮುಂದಿನ ರಾಜರಥ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ಆರ್ಯ ಅಭಿನಯಿಸುತ್ತಿದ್ದು ಆ ಮೂಲಕ ಕನ್ನಡಕ್ಕೆ ಎಂಟ್ರಿಕೊಟ್ಟಿದ್ದಾರೆ...

ರಂಗೀತರಂಗ ಖ್ಯಾತಿಯ ಭಂಡಾರಿ ಬ್ರದರ್ಸ್ ಅವರ ಮುಂದಿನ ರಾಜರಥ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ಆರ್ಯ ಅಭಿನಯಿಸುತ್ತಿದ್ದು ಆ ಮೂಲಕ ಕನ್ನಡಕ್ಕೆ ಎಂಟ್ರಿಕೊಟ್ಟಿದ್ದಾರೆ. 
ರಾಜರಥ ಚಿತ್ರದಲ್ಲಿ ಆರ್ಯ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಆರ್ಯ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಚಿತ್ರದಲ್ಲಿನ ಆರ್ಯ ಅವರ ಪಾತ್ರದ ಕುರಿತ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. 
ಮೈಸೂರಿನಲ್ಲಿ ಬಿಡುಬಿಟ್ಟಿರುವ ಚಿತ್ರ ತಂಡ ಚಿತ್ರೀಕರಣದಲ್ಲಿ ತೊಡಗಿದೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ ರಾಜರಥ ಚಿತ್ರದಲ್ಲಿನ ಒಂದು ಪ್ರಮುಖ ಪಾತ್ರಕ್ಕಾಗಿ ಖ್ಯಾತ ನಟನನ್ನು ಹುಡುಕುತ್ತಿದ್ದೇವು ಅದರಂತೆ ನಮಗೆ ತಮಿಳಿನ ನಟ ಆರ್ಯ ಆ ಪಾತ್ರಕ್ಕೆ ಸೂಕ್ತ ಎಂದೆನಿಸಿತು. ಈ ಕುರಿತು ಆರ್ಯವನ್ನು ಸಂಪರ್ಕಿಸಿದ್ದು ಅವರು ಈ ಪಾತ್ರವನ್ನು ಮಾಡಲು ಒಪ್ಪಿಕೊಂಡರು ಎಂದು ಹೇಳಿದ್ದಾರೆ. 
ರಾಜರಥ ಚಿತ್ರದಲ್ಲಿ ನಿರೂಪ್ ಭಂಡಾರಿ, ಅವಂತಿಕಾ ಶೆಟ್ಟಿ, ರವಿಶಂಕರ್ ಮುಂತಾದವರು ನಟಿಸುತ್ತಿದ್ದು ಚಿತ್ರಕ್ಕೆ ಅನೂಪ್ ಭಂಡಾರಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅಜಯ್ ರೆಡ್ಡಿ, ಅಂಜು ವಲ್ಲಭ್, ವಿಷ್ಟು ಡಾಕಪ್ಪಗಿರಿ ಮತ್ತು ಸತೀಶ್ ಶಾಸ್ತ್ರಿ ಎಂಬುವರು ಬಂಡವಾಳ ಹೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

Bengaluru: ಪತ್ನಿ ಜತೆಗಿನ ಲೈಂಗಿಕ ಕ್ರಿಯೆ video ಶೇರ್! ಸ್ನೇಹಿತರೊಂದಿಗೆ ಮಲಗಲು 'ಪಾಪಿ ಪತಿ​' Syed ಒತ್ತಾಯ, ದೂರು ದಾಖಲು!

1st test: Ravindra Jadeja ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣ, MS Dhoni, Rishabh Pant ಇರುವ Elite ಗ್ರೂಪ್ ಸೇರ್ಪಡೆ!

SCROLL FOR NEXT