ಖ್ಯಾತ ಹಿನ್ನೆಲೆ ಗಾಯಕ ಎಲ್ಎನ್ ಶಾಸ್ತ್ರಿ ನಿಧನ
ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಿನ್ನೆಲೆ ಗಾಯಕ ಎಲ್ ಎನ್ ಶಾಸ್ತ್ರಿ (46) ಆ.30 ರಂದು ವಿಧಿವಶರಾಗಿದ್ದಾರೆ.
ಬೆಂಗಳೂರು: ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಿನ್ನೆಲೆ ಗಾಯಕ ಎಲ್ ಎನ್ ಶಾಸ್ತ್ರಿ (46) ಆ.30 ರಂದು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಸ್ವಗೃಹದಲ್ಲಿ ಎಲ್ಎನ್ ಶಾಸ್ತ್ರಿ ವಿಧಿವಶರಾಗಿದ್ದಾರೆ. ಶಾಸ್ತ್ರೀಯ ಸಂಗೀತದಲ್ಲಿ ಹೆಸರುವಾಸಿಯಾಗಿದ್ದ ಎಲ್ಎನ್ ಶಾಸ್ತ್ರಿ ಅವರು 3 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಕಂಠದಾನ ಮಾಡಿದ್ದಾರೆ. 1996 ರಲ್ಲಿ ಅಜಗಜಾಂತರ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಲ್ಎನ್ ಶಾಸ್ತ್ರಿ ಪ್ರವೇಶಿಸಿದ್ದರು. ಹಿನ್ನೆಲೆ ಗಾಯಕರಾಗಿದ್ದ ಶಾಸ್ತ್ರಿ ಅವರು 25 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಜನುಮದ ಜೋಡಿ ಚಿತ್ರದ ಕೋಲುಂಡೆ ಜಂಗಮದೇವ ಹಾಡಿನ ಮೂಲಕ ಮತ್ತಷ್ಟು ಪ್ರಸಿದ್ಧರಾಗಿದ್ದ ಎಲ್ಎನ್ ಶಾಸ್ತ್ರಿ ಅವರು ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.