ಅನೂಪ್ ಭಂಡಾರಿ-ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಆರ್ಯ ನಂತರ ರಾಜರಥ ಚಿತ್ರಕ್ಕೆ ಪುನೀತ್, ರಾಣಾ ಎಂಟ್ರಿ

ಅನೂಪ್ ಭಂಡಾರಿ ನಿರ್ದೇಶನದ ನಿರೂಪ್ ಭಂಡಾರಿ ನಟನೆಯ ರಾಜರಥ ಚಿತ್ರ ಜನವರಿ 25ರಂದು ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ...

ಅನೂಪ್ ಭಂಡಾರಿ ನಿರ್ದೇಶನದ ನಿರೂಪ್ ಭಂಡಾರಿ ನಟನೆಯ ರಾಜರಥ ಚಿತ್ರ ಜನವರಿ 25ರಂದು ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 
ರಾಜರಥ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ಆರ್ಯ ಸಹ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಇನ್ನು ಇದೇ ಚಿತ್ರಕ್ಕಾಗಿ ನಿರ್ದೇಶಕ ಅನೂಪ್ ಭಂಡಾರಿ ಅವರು ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ತೆಲುಗಿನ ನಟ ರಾಣಾ ದಗ್ಗುಬಾಟಿ ಅವರನ್ನು ಕರೆತರಲು ತೀರ್ಮಾನಿಸಿದ್ದಾರೆ. 
ಕನ್ನಡ ಹಾಗೂ ತೆಲುಗಿನಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು ಕನ್ನಡದಲ್ಲಿ ಪುನೀತ್ ಹಾಗೂ ತೆಲುಗಿನಲ್ಲಿ ರಾಣಾ ದಗ್ಗುಬಾಟಿಗಾಗಿ ನಿರ್ದೇಶಕರು ಪಾತ್ರವೊಂದನ್ನು ಸೃಷ್ಟಿಸಿದ್ದಾರೆ. ಖ್ಯಾತ ನಟರು ಯಾವ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬುದನ್ನು ನಿರ್ದೇಶಕರು ಬಹಿರಂಗಪಡಿಸಿಲ್ಲ. 
ಪಾತ್ರವೊಂದನ್ನು ಸೃಷ್ಟಿಸಿರುವ ಅನೂಪ್ ಭಂಡಾರಿ ಅವರು ಇದಕ್ಕಾಗಿ ಪುನೀತ್ ರಾಜಕುಮಾರ್ ಅವರನ್ನು ಮುಖಾಮುಖಿ ಸಂದರ್ಶಿಸಿಲ್ಲ. ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತಂತೆ ಪುನೀತ್ ರಾಜಕುಮಾರ್ ಅವರನ್ನು ದೂರವಾಣಿ ಕರೆ ತಿಳಿಸಿದ್ದು ಇದಕ್ಕೆ ಪುನೀತ್ ಅವರನ್ನು ಅಭಿನಯಿಸುವುದಾಗಿ ಒಪ್ಪಿಕೊಂಡಿರುವುದಾಗಿ ಅನೂಪ್ ಭಂಡಾರಿ ಹೇಳಿದ್ದಾರೆ. 
ಇನ್ನು ತೆಲುಗಿನ ರಾಜರಥಂ ಚಿತ್ರದ ಪಾತ್ರಕ್ಕಾಗಿ ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿಯನ್ನು ಸಂಪರ್ಕಿಸುವಂತೆ ಆರ್ಯ ಸಲಹೆ ನೀಡಿದ್ದರು. ಅಂತೆ ನಾನು ರಾಣಾ ಅವರಿಗೆ ಕರೆ ಮಾಡಿ ತಿಳಿಸಿದ್ದು ಅವರು ಸಹ ಅಭಿನಯಿಸುವುದಾಗಿ ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಮುಗಿಸಿ ಅಂದುಕೊಂಡಂತೆ ಜನವರಿ 25ಕ್ಕೆ ದೇಶಾದ್ಯಂತ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?