ವಿಜಯ್ ದೇವರಕೊಂಡ-ಗಣೇಶ್-ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ಗಣೇಶ್-ರಶ್ಮಿಕಾ ಅಭಿನಯದ ಚಮಕ್ ಆಡಿಯೋ ಬಿಡುಗಡೆಗೆ ತೆಲುಗಿನ 'ಅರ್ಜುನ್ ರೆಡ್ಡಿ' ಸಾಥ್

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಮಕ್ ಆಡಿಯೋ ಬಿಡುಗಡೆ ಕಾರ್ಯಕ್ರಮ ಇಂದು ಅದ್ಧೂರಿಯಾಗಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ತೆಲುಗಿನ...

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಮಕ್ ಆಡಿಯೋ ಬಿಡುಗಡೆ ಕಾರ್ಯಕ್ರಮ ಇಂದು ಅದ್ಧೂರಿಯಾಗಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ತೆಲುಗಿನ ನಟ ವಿಜಯ್ ದೇವರಕೊಂಡ ಅತಿಥಿಯಾಗಿ ಆಗಮಿಸುತ್ತಿದ್ದಾರೆ. 
ಇತ್ತೀಚೆಗಷ್ಟೇ ತೆಲುಗಿನಲ್ಲಿ ಬಿಡುಗಡೆಯಾಗಿದ್ದ ಅರ್ಜುನ್ ರೆಡ್ಡಿ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದ ವಿಜಯ್ ದೇವರಕೊಂಡ ಇದೀಗ ಚಮಕ್ ಚಿತ್ರದ ಆಡಿಯೋ ಬಿಡುಗಡೆಗೆ ಆಗಮಿಸುತ್ತಿದ್ದಾರೆ. ಉಳಿದಂತೆ ಪದ್ಮಶ್ರೀ ಪುರಸ್ಕೃತ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಅವರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. 
ಚಮಕ್ ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸುತ್ತಿದ್ದು ಇದೇ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ಹಾಗೂ ಗಣೇಶ್ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದೆ. ಚಿತ್ರವನ್ನು ಚಂದ್ರಶೇಖರ್ ನಿರ್ಮಿಸಿದ್ದು ಚಿತ್ರ ಡಿಸೆಂಬರ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆ. 
ಇತ್ತೀಚೆಗಷ್ಟೇ ಚಿತ್ರತಂಡ ಚಮಕ್ ಚಿತ್ರದ ಟೀಸರ್ ಬಿಡುಗಡೆ ಮಾಡಿತ್ತು. ಗಣೇಶ್ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಫಸ್ಟ್ ನೈಟ್ ದೃಶ್ಯಾವಳಿ ತೀವ್ರ ಕುತೂಹಲ ಮೂಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!