ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಟ ಸುದೀಪ್ 
ಸಿನಿಮಾ ಸುದ್ದಿ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ನಟ ಕಿಚ್ಚಾ ಸುದೀಪ್, ವಿಷ್ಣು ಸ್ಮಾರಕಕ್ಕಾಗಿ ಮನವಿ!

ಖ್ಯಾತ ನಟ ಕಿಚ್ಚಾ ಸುದೀಪ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕುರಿತಂತೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಖ್ಯಾತ ನಟ ಕಿಚ್ಚಾ ಸುದೀಪ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕುರಿತಂತೆ ಚರ್ಚೆ ಮಾಡಿದ್ದಾರೆ  ಎನ್ನಲಾಗಿದೆ.
ಸಿಎಂ ನಿವಾಸ ಕಾವೇರಿಗೆ ತೆರಳಿದ್ದ ನಟ ಸುದೀಪ್ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಚರ್ಚಿಸಿದರು. ಈ ವೇಳೆ ನಟ ಸುದೀಪ್ ಸಾಹಸಸಿಂಹ ವಿಷ್ಣುವರ್ಧನ್ ಅವರ  ಸಮಾಧಿಯ ಸ್ಥಳವನ್ನು ಪುಣ್ಯಭೂಮಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ. ಅಲ್ಲದೆ ಈ ಕಾರ್ಯಕ್ಕೆ ಅಭಿಮಾನಿಗಳಾದ ನಾವು ಯಾವುದೇ ರೀತಿಯ ಆರ್ಥಿಕ ಮತ್ತು ಇತರೆ ನೆರವು ನೀಡಲು ಸಿದ್ಧ. ಈ ಬಗ್ಗೆ ಇರುವ ಕಾನೂನು  ತೊಡಕುಗಳನ್ನು ಮಾತ್ರ ನಿವಾರಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಸುದೀಪ್ ಮನವಿ ಮಾಡಿದ್ದಾರೆ.
ಅಲ್ಲದೆ ಇದೇ ಡಿಸೆಂಬರ್ 30ರಂದು ವಿಷ್ಣು ಪುಣ್ಯತಿಥಿ ಇದ್ದು ಅಷ್ಟರೊಳಗೆ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವಂತೆ ಸುದೀಪ್ ಮನವಿ ಮಾಡಿದ್ದಾರೆ. 
ಇನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, "ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯ ಸ್ಥಳವನ್ನು ಪುಣ್ಯಭೂಮಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ವಿಷ್ಣು ಸಮಾಧಿಯ 100 ಎಕರೆ  ಜಾಗವನ್ನ ನಾವೇ ಖರೀದಿ ಮಾಡುತ್ತೇವೆ. ಸಮಾಧಿಯನ್ನು ಸ್ಥಳಾಂತರ ಮಾಡೋದು ಬೇಡ, ಸಮಾಧಿ ಜಾಗವನ್ನ ಪುಣ್ಯಭೂಮಿ ಅಂತಾ ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದೇನೆ. ವಿಷ್ಣು ವರ್ಧನ್ ಅವರ ಪತ್ನಿ ಭಾರತಿ ಅವರ  ಆಸೆಯಂತೆ ಇಲ್ಲಿ ಬದಲಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿದರೂ ನಮಗೆ ಬೇಸರವಿಲ್ಲ. ಆದರೆ ಸ್ಮಾರಕ ಕಾರ್ಯ ತಡವಾಗುವುದು ಬೇಡ.. ಈಗಾಗಲೇ 8 ವರ್ಷಗಳಾದರೂ ವಿಷ್ಣು ಸ್ಮಾರಕ ಯೋಜನೆ ನೆನೆಗುದಿಗೆ ಬಿದ್ದಿದೆ.  ಹೀಗಾಗಿ ಈ ಬಗ್ಗೆ ಸಿಎಂ ಸಿದ್ಗರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಜೊತೆಗೆ ಪುಣ್ಯಭೂಮಿ ಮಾಡಿಕೊಡೋದಾಗಿ ಸಿಎಂ ಭರವಸೆ ನೀಡಿದ್ದಾರೆ  ಎಂದು ಸುದೀಪ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT