ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಬೆಂಗಳೂರಲ್ಲೇ ವಿಷ್ಣು ಸ್ಮಾರಕಕ್ಕಾಗಿ ಸುದೀಪ್ ಮನವಿ, ಭಾರತಿ ವಿಷ್ಣುವರ್ಧನ್ ಅಸಮಾಧಾನ!

ದಿವಂಗತ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ವಿಚಾರ ಸಂಬಂಧ ನಟ ಸುದೀಪ್ ವಿರುದ್ಧ ವಿಷ್ಣು ವರ್ಧನ್ ಪತ್ನಿ ನಟಿ ಭಾರತಿ ವಿಷ್ಣು ವರ್ಧನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ದಿವಂಗತ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿಯನ್ನು ಮೈಸೂರಿಗೆ ಸ್ಥಳಾಂತರಿಸಬಾರದು ಎಂದು ಚಿತ್ರನಟ ಕಿಚ್ಚ ಸುದೀಪ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಬೆನ್ನಲ್ಲೇ ನಟ  ಸುದೀಪ್ ನಡೆಗೆ ವಿಷ್ಣು ವರ್ಧನ್ ಪತ್ನಿ ನಟಿ ಭಾರತಿ ವಿಷ್ಣು ವರ್ಧನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಪತ್ರಿಕೆಯೊಂದು ವರದಿ ಮಾಡಿರುವಂತೆ ನಟ ಸುದೀಪ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷ್ಣು ಸ್ನಾರಕ ಬೆಂಗಳೂರಲ್ಲೇ ನಿರ್ಮಾಣವಾಗಲಿ ಎಂಬ ಮನವಿ ಮಾಡಿರುವುದು ಭಾರತಿ ವಿಷ್ಣುವರ್ಧನ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ ಮೈಸೂರಿನಲ್ಲೇ ಸ್ಮಾರಕ ಇರಲಿ ಎಂದು ಪ್ರತಿಪಾದಿಸಿರುವ ಅವರು, 'ಸುದೀಪ್‌ ಮುಖ್ಯಮಂತ್ರಿಯನ್ನು ಭೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ. ಜತೆಗೆ ಸುದೀಪ್‌ ನನ್ನ ಜೊತೆ ಯಾವುದೇ  ವಿಷಯವನ್ನು ಚರ್ಚಿಸಿಲ್ಲ. ಬೆಂಗಳೂರಿನಲ್ಲಿ ಸ್ಮಾರಕ ಬೇಡ ಎಂದು ಈಗಾಗಲೇ ನಿರ್ಧರಿಸಲಾಗಿದೆ. ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಭರವಸೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ಆಸಕ್ತಿ ವಹಿಸಿದ್ದಾರೆ. ಅಲ್ಲದೇ 2 ಕೋಟಿ ರೂಪಾಯಿ ಹಣವನ್ನೂ ಸರ್ಕಾರ ನೀಡಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸ್ಮಾರಕ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಸುದೀಪ್ ಅವರ ಹೇಳಿಕೆ ಕುರಿತಂತೆ ಮಾತನಾಡಿದ ಭಾರತಿ ವಿಷ್ಣು ವರ್ಧನ್ ಅವರು, 'ಇಲ್ಲಿ ಹಣದ ಸಮಸ್ಯೆಯಿಲ್ಲ. ಸುದೀಪ್‌ ವಾಸ್ತವ ಅರಿತುಕೊಳ್ಳಬೇಕು. ಹಣದ ಕೊರತೆಯಿದ್ದರೆ ನಮ್ಮ ಕುಟುಂಬವೇ ಭರಿಸುತ್ತಿತ್ತು. ಸ್ಮಾರಕದ ಸಮಸ್ಯೆ ಏನಿದೆ ಎಂದು ಅವರಿಗೆ ಗೊತ್ತಿಲ್ಲ. ಯಾರ್ಯಾರು ಬಂದು ಮುಖ್ಯಮಂತ್ರಿಯನ್ನು ಭೇಟಿ ಮಾಡುತ್ತಾರೋ ನನಗೆ ಗೊತ್ತಿಲ್ಲ ಎಂದು ಅಸಮಾಧಾನ  ವ್ಯಕ್ತಪಡಿಸಿದರು.
ಸೋಮವಾರ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಸುದೀಪ್‌, ವಿಷ್ಣು ಸ್ಮಾರಕವನ್ನು ಎಲ್ಲಿ ಬೇಕಾದರೂ ನಿರ್ಮಿಸಲಿ. ಆದರೆ, ಸಮಾಧಿಯನ್ನು ಸ್ಥಳಾಂತರಿಸುವುದು ಬೇಡವೆಂದು ಮನವಿ ಮಾಡಿಕೊಂಡಿದ್ದರು. ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್‌, ವಿಷ್ಣುವರ್ಧನ ಸಮಾಧಿಯನ್ನು ಪುಣ್ಯಭೂಮಿ ಎಂದು ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಸಮಾಧಿ ಸ್ಥಳವನ್ನು ಕನ್ನಡ ಚಿತ್ರರಂಗವೇ ಖರೀದಿಸಲಿದೆ. ಹೀಗಾಗಿ ಸ್ಥಳಾಂತರ ಬೇಡ ಎಂದು ಮನವಿ ಮಾಡಿಕೊಂಡಿದ್ದೇನೆ. ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT