ಸಂಯುಕ್ತಿ ಹೆಗಡೆ 
ಸಿನಿಮಾ ಸುದ್ದಿ

'ಕಿರಿಕ್ ಪಾರ್ಟಿ' ಸಂಯುಕ್ತಾ ಹೆಗಡೆ ಬಿಗ್ ಬಾಸ್ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ

ಕಿರಿಕ್ ಹುಡುಗಿ ಸಂಯುಕ್ತಾ ಹೆಗಡೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಕಲರ್ಸ್ ಸೂಪರ್ ಚಾನಲ್ ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ .......

ಬೆಂಗಳೂರು: ಕಿರಿಕ್ ಹುಡುಗಿ ಸಂಯುಕ್ತಾ ಹೆಗಡೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಕಲರ್ಸ್ ಸೂಪರ್ ಚಾನಲ್ ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಐದನೇ ಸೀಜನ್ ನಲ್ಲಿ ಸಂಯುಕ್ತಾಗೆ ವೈಲ್ಡ್ ಕಾರ್ಡ್ ಎಂಟ್ರಿ ಸಿಕ್ಕಿದೆ.
ಇದಾಗಲೇ ಸುದೀಪ್ ಅವರೊಡನೆ ಕಿಚ್ಚನ್ ಟೈಮ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಸಂಯುಕ್ತಾ ಬಿಗ್ ಬಾಸ್ ಮನೆಯ ಕುರಿತು ಕೆಲ ಅಂಶಗಳನ್ನು ತಿಳಿದುಕೊಂಡಿದ್ದರು. ಇದೀಗ ತಾವೇ ಮನೆಯೊಳಗೆ ಸೇರಿಕೊಂಡಿದ್ದಾರೆ. ಇದಾಗಲೇ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಸಂಯುಕ್ತಾ ಅವರ ಬಿಗ್ ಬಾಸ್ ಎಂಟ್ರಿಯಿಂದ ಅವರ ಜನಪ್ರಿಯತೆ ಜತೆಜತೆಗೇ ಕಾರ್ಯಕ್ರಮದ ಜನಪ್ರಿಯತೆಯೂ ಹೆಚ್ಚಲಿದೆ.
ಕಿರಿಕ್ ಪಾರ್ಟಿ ನಂತರ ಈ ನಟಿ ಕಾಲೇಜ್ ಕುಮಾರ್ ಕನ್ನಡ ಚಿತ್ರದಲ್ಲಿ ಕಾಣಿಸಿ ಕೊಂಡಿದ್ದಾರೆ.. ಜತೆಗೆ ಕಿರಿಕ್ ಪಾರ್ಟಿ ತೆಲುಗು ಅವತರಣಿಕೆಯಲ್ಲಿ ಸಹ ಅಭಿನಯಿಸುತ್ತಿದ್ದಾರೆ.  ನಟಿ ಇದಾಗಲೇ ಎಂ ಟಿವಿಯ ರೋಡೀಸ್ ಕಾರ್ಯಕ್ರಮದ ಹದಿನೈದನೇ ಸರಣಿಯಲ್ಲಿ ಭಾಗವಹಿಸಿ ಬಂದಿದ್ದಾರೆ.  ಇದೀಗ ಪುನಃ ಬಿಗ್ ಬಾಸ್ ಕಾರ್ಯಕ್ರಮದ ಮೂಲಕ ಮತ್ತೆ ಕನ್ನಡ ಪ್ರೇಕ್ಷಕರನ್ನು ಮನರಂಜಿಸ ಹೊರಟಿದ್ದಾರೆ.
ಅಂದಹಾಗೆ ಸಂಯುಕ್ತಾ ಅವರೊಡನೆ ಬಿಗ್ ಬಾಸ್ ಗೆ ಇನ್ನೋರ್ವ ನಟಿಯೂ ಪ್ರವೇಶ ಪಡೆದಿದ್ದು ಅವರು ಸುವರ್ಣ ವಾಹಿನಿಯ 'ಡ್ಯಾನ್ಸ್ ಡ್ಯಾನ್ಸ್'ನಲ್ಲಿ  ಭಾಗವಹಿಸಿದ್ದ ಲಾಸ್ಯ ನಾಗ್. 'ಅಸತೋಮ ಸದ್ಗಮಯ' ಚಿತ್ರದ ನಾಯಕಿಯಾಗಿರುವ ಈಕೆ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದರೊಡನೆ ಕಲರ್ಸ್ ಕನ್ನಡದ 'ಪದ್ಮಾವತಿ' ಧಾರಾವಾಹಿಯಲ್ಲಿಯೂ ಇವರು ನಟಿಸಿದ್ದು ಇದೀಗ ಸಂಯುಕ್ತಾ ಅವರೊಡನೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT