ಅಂಜನಿಪುತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಪುನೀತ್ ಅಭಿನಯದ 'ಅಂಜನಿಪುತ್ರ' ಪ್ರದರ್ಶನಕ್ಕೆ ಕೋರ್ಟ್ ತಡೆ!

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ....

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.

ಚಿತ್ರದಲ್ಲಿ ವಕೀಲರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಬಳಕೆ ಮಾಡಲಾಗಿದ್ದು, ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಕೋರಿ ವಕೀಲ ನಾರಾಯಣಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜನವರಿ 2ರ ವರೆಗೆ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.

ಇಂದು ಸಂಜೆ 7.30ರ ನಂತರ ರಾಜ್ಯಾದ್ಯಾಂತ ಎಲ್ಲಾ ಚಿತ್ರಮಂದರಿಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ.

'ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ' ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಎ.ಹರ್ಷ ನಿರ್ದೇಶನದ ಹಾಗೂ ಎಮ್ ಎನ್.ಕುಮಾರ್ ನಿರ್ಮಾಣದ ಅಂಜನಿಪುತ್ರ ಕಳೆದ ಗುರುವಾರ ತೆರೆ ಕಂಡಿದ್ದು, ಪವರ್ ಸ್ಟಾರ್ ಪುನೀತ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel