Music Director Arjun Janya
ಮಂಗಳೂರು: ಮಂಗಳೂರಿನ ಫೋರಂ ಮಾಲ್ ನಲ್ಲಿ ಶುಕ್ರವಾರ ನಡೆದ ಬೆಂಕಿ ಅನಾಹುತದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಮಾಲ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ವೇದಿಕೆಗೆ ಎಂಟ್ರಿಯಾಗುತ್ತಿದ್ದ ವೇಳೆ ಬೈಕ್ ನಲ್ಲಿ ಅಳವಡಿಸಿದ್ದ ಫೈರ್ ಕ್ರ್ಯಾಕರ್ ಅರ್ಜುನ್ ಜನ್ಯ ಅವರ ಎಡಗೈಗೆ ತಾಗಿ ಸಣ್ಣ ಗಾಯವಾಗಿದೆ.
ಕೂಡಲೇ ಸ್ಥಳದಲ್ಲಿದ್ದ ಸಿಬ್ಬಂದಿಗಳು ಧಾವಿಸಿ ಅರ್ಜುನ್ ಜನ್ಯ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಅರ್ಜುನ್ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಕಾರ್ಯಕ್ರಮ ಅಂತ್ಯಗೊಳ್ಳುತ್ತಿದ್ದಂತೆಯೇ ಅರ್ಜುನ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics