ರಜಿನಿಕಾಂತ್ 
ಸಿನಿಮಾ ಸುದ್ದಿ

ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ರಜಿನಿಕಾಂತ್ ರಾಜಕೀಯ ಎಂಟ್ರಿ ಗಿಫ್ಟ್?

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ವಿಷಯ ಸದ್ಯ ತಮಿಳುನಾಡಿನಲ್ಲಿ ಕುತೂಹಲ ಕೆರಳಿಸಿದೆ. ಈ ಮಧ್ಯೆ ಹೊಸ ವರ್ಷಕ್ಕೆ...

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ವಿಷಯ ಸದ್ಯ ತಮಿಳುನಾಡಿನಲ್ಲಿ ಕುತೂಹಲ ಕೆರಳಿಸಿದೆ. ಈ ಮಧ್ಯೆ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ರಜಿನಿಕಾಂತ್ ಅವರು ರಾಜಕೀಯ ಎಂಟ್ರಿ ಗಿಫ್ಟ್ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. 
ರಜನಿ ಅವರ ಕೆಲ ಆಪ್ತ ಮೂಲಗಳಿಂದ ಬಂದ ಮಾಹಿತಿ ಪ್ರಕಾರ ರಜಿನಿಕಾಂತ್ ಅವರು ಡಿಸೆಂಬರ್ 31ರಂದು ತಮ್ಮ ರಾಜಕೀಯ ಪ್ರವೇಶ ಕುರಿತು ಘೋಷಣೆ ಮಾಡಲಿದ್ದಾರೆ. ಅದಕ್ಕೂ ಮುನ್ನ ರಜಿನಿ ಅವರು ಡಿಸೆಂಬರ್ 26ರಿಂದ ಆರು ದಿನಗಳ ಕಾಲ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರಂತೆ. 
ಈ ವೇಳೆ ತಮ್ಮ ರಾಜಕೀಯ ಪ್ರವೇಶ ಕುರಿತಂತೆ ಅಭಿಮಾನಿಗಳೊಂದಿಗೆ ರಜಿನಿಕಾಂತ್ ಮುಕ್ತವಾಗಿ ಮಾತನಾಡಲಿದ್ದಾರೆ ಎಂದು ರಜಿನಿಕಾಂತ್ ಅವರ ಆಪ್ತ ಸಲಹೆಗಾರ ತಮಿಳರುವಿ ಮಣಿಯನ್ ಹೇಳಿದ್ದಾರೆ. 
ರಜಿನಿಕಾಂತ್ ರಾಜಕೀಯ ಪ್ರವೇಶದಕ್ಕೆ ಯಾವುದೇ ಬದಲಾವಣೆಗಳಿಲ್ಲ. ಈ ಬಾರಿ ಅವರು ಖಂಡಿತವಾಗಿ ಅಭಿಮಾನಿಗಳಿಗೆ ತಮ್ಮ ಮನಸ್ಸನ್ನು ತೆರೆದುಕೊಳ್ಳುತ್ತಾರೆ. ತಮಿಳುನಾಡಿನಲ್ಲಿ ಮುಂದಿನ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎಂದು ನನಗೆ ಖಚಿವಾಗಿದೆ ಎಂದು ಹೇಳಿದರು. 
ಆಗಸ್ಟ್ 20ರಂದು ಸಭೆ ಸೇರಿದ್ದ ರಜಿನಿಕಾಂತ್ ಅಭಿಮಾನಿಗಳು, ರಾಜಕೀಯ ಪ್ರವೇಶಿಸಬೇಕು ಎಂದು ರಜಿನಿಯವರನ್ನು ಒತ್ತಾಯಿಸಿದ್ದರು. ಅಂದಿನಿಂದ ರಜಿನಿಕಾಂತ್ ರಾಜಕೀಯ ಪ್ರವೇಶ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT